ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಆರತಿ ಹಾಡು | ಪಂಕಜ ಮುಖಿಯರೆಲ್ಲರೂ ಬಂದು | ಪುರಂದರ ವಿಠಲ | Aarati Song | Pankaja Mukhiyarellaru Bandu


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಪಂಕಜ ಮುಖಿಯರೆಲ್ಲರೂ ಬಂದು ಲಕ್ಷ್ಮೀ 
ವೆಂಕಟರಮಣಗಾರತಿ ಎತ್ತಿರೇ ||ಪ||

ಮತ್ಸ್ಯಾವತಾರಗೆ ಮಂದರೋದ್ಧಾರಗೆ
ಉತ್ಸಾಹದಿ ಭೂಮಿ ತಂದವಗೇ
ವತ್ಸಗಾಗಿ ಕಂಭದಿಂದಲಿ ಬಂದ
ಉತ್ಸವನರಸಿಂಹಗಾರತಿ ಎತ್ತಿರೇ ||೧||

ವಾಮನ ರೂಪದಿ ದಾನವ ಬೇಡಿದಗೆ
ಪ್ರೇಮದಿ ಕೊಡಲಿಯ ಪಿಡಿದವಗೆ
ರಾಮನಾಗಿ ದಶಶಿರನನ್ನು ಕೊಂದ
ಸ್ವಾಮಿ ಶ್ರೀ ಕೃಷ್ಣಗೆ ಆರತಿ ಎತ್ತಿರೇ ||೨||

ಬತ್ತಲೆ ನಿಂತಗೆ ಬೌದ್ಧವತಾರಗೆ
ಉತ್ತಮ ಅಶ್ವವನೇರಿದವಗೆ
ಭಕ್ತರ ಸಲಹುವ ಪುರಂದರ ವಿಠಲಗೆ
ಮುತ್ತೈದೆಯರು ಆರತಿ ಎತ್ತಿರೆ ||೩||

paMkaja mukhiyarellarU baMdu lakShmI 
veMkaTaramaNagaarati ettirE ||pa||

matsyaavataarage maMdarOddhaarage
utsaahadi bhUmi taMdavagE
vatsagaagi kaMbhadiMdali baMda
utsavanarasiMhagaarati ettirE ||1||

vaamana rUpadi daanava bEDidage
prEmadi koDaliya piDidavage
raamanaagi daSashiranannu koMda
svaami SrI kRuShNage Arati ettirE ||2||

battale niMtage bauddhavataarage
uttama aSvavanEridavage
bhaktara salahuva puraMdara viThalage
muttaideyaru Arati ettire ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru