ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಾರೋ ನಮ್ಮ ಮನೆಗೆ | ರಂಗ ವಿಠಲ | Baaro Namma Manege | Sri Sripadarajaru


ಸಾಹಿತ್ಯ : ಶ್ರೀ ಶ್ರೀಪಾದರಾಜರು (ರಂಗ ವಿಠಲ)
Kruti: Sri Sripadarajaru (Ranga vittala)


ಬಾರೋ ನಮ್ಮ ಮನೆಗೆ ಗೋಪಾಲಕೃಷ್ಣ |ಪ|

ಗೊಲ್ಲ ಬಾಲಕರನು ನಿಲ್ಲಿಸಿ ಪೆಗಲೇರಿ|
ಗುಲ್ಲು ಮಾಡದೆ ಮೊಸರೆಲ್ಲ ಸವಿದ ಕೃಷ್ಣ |೧|

ಕಸ್ತೂರಿ ತಿಲಕವ ಶಿಸ್ತಾಗಿ ಪಣೆಯೊಳಿಟ್ಟು|
ಮಸ್ತಕದಲ್ಲಿ ಪರವಸ್ತು ತೋರಿದ ಕೃಷ್ಣ |೨|

ಮೂರ್ಜಗವನ್ನೆಲ್ಲ ಬೊಜ್ಜೆಯೊಳಗೆ ಇಟ್ಟು|
ಗೆಜ್ಜೆಯ ಕಟ್ಟಿ ತಪ್ಪು ಹೆಜ್ಜೆಯನಿಕ್ಕುತ |೩|

ನಾರೇರು ಬಿಚ್ಚಿಟ್ಟ ಸೀರೆಗಳನೆ ಒಯ್ದು|
ಮ್ಯಾರೆ ಇಲ್ಲದೆ ಕರತೋರೆಂದ ಶ್ರೀಕೃಷ್ಣ |೪|

ಅಂಗನೆಯರ ವ್ರತ ಭಂಗವ ಮಾಡಿದ|
ರಂಗವಿಠಲ ಭವಭಂಗವ ಪರಿಹರಿಸೋ |೫|

bArO namma manege gOpAlakRuShNa |pa|
 
golla bAlakaranu nillisi pegalEri|
gullu mADade mosarella savida kRuShNa |1|
 
kastUri tilakava SistAgi paNeyoLiTTu|
mastakadalli paravastu tOrida kRuShNa |2|
 
mUrjagavannella bojjeyoLage iTTu|
gejjeya kaTTi tappu hejjeyanikkuta |3|
 
nArEru bicciTTa sIregaLane oydu|
myAre illade karatOreMda SrIkRuShNa |4|
 
aMganeyara vrata BaMgava mADida|
raMgaviThala BavaBaMgava pariharisO |5|

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru