ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ರಂಗನಾಯಕ ರಾಜೀವಲೋಚನ | ಪುರಂದರ ವಿಠಲ | Ranganayaka Rajeevalochana | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ರಂಗನಾಯಕ ರಾಜೀವಲೋಚನ ರಮಣನೆ ಬೆಳಗಾಯಿತೇಳೆನ್ನುತ ||ಪ|| 
ಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳು 
ಶೃಂಗಾರದ ನಿದ್ದೆ ಸಾಕೆನ್ನುತ ||ಅಪ||

ಪಕ್ಷಿರಾಜನು ಬಂದು ಬಾಗಿಲೊಳಗೆ ನಿಂದು 
ಅಕ್ಷಿ ತೆರೆದು ಬೇಗ ಈಕ್ಷಿಸೆಂದು |
ಪಕ್ಷಿ ಜಾತಿಗಳೆಲ್ಲ ಚಿಲಿಪಿಲಿಗುಟ್ಟುತ 
ಸೂಕ್ಷ್ಮದಲಿ ನಿನ್ನ ಸ್ಮರಿಸುವವೋ ಕೃಷ್ಣ ||೧||

ಸನಕ ಸನಂದನ ಸನತ್ಸುಜಾತರು ಬಂದು 
ವಿನಯದಿಂ ಕರ ಮುಗಿದು ಓಲೈಪರು |
ಘನ ಶುಕ ಶೌನಕ ವ್ಯಾಸ ವಾಲ್ಮೀಕರು 
ನೆನೆದು ನೆನೆದು ಕೊಂಡಾಡುವರೋ ಹರಿಯೇ ||೨||

ಸುರರು ಕಿನ್ನರರು ಕಿಂಪುರುಷರು ಉರಗರು 
ಪರಿಪರಿಯಲಿ ನಿನ್ನ ಸ್ಮರಿಸುವರೋ ||
ಅರುಣನು ಬಂದು ಉದಯಾಚಲದಲಿ ನಿಂದು ಕಿರಣ 
ತೋರುವನು ಭಾಸ್ಕರನು ಶ್ರೀಹರಿಯೇ ||೩||

ಪದುಮನಾಭನೆ ನಿನ್ನ ನಾಮಾಮೃತವನ್ನು 
ಪದುಮಾಕ್ಷಿಯರು ತಮ್ಮ ಗೃಹದೊಳಗೆ |
ಉದಯದೊಳೆದ್ದು ಸವಿದಾಡುತ್ತ ಪಾಡುತ್ತ 
ದಧಿಯ ಕಡೆವರೇಳು ಮಧುಸೂದನ ಕೃಷ್ಣ ||೪||

ಮುರಮಥನನೇ ನಿನ್ನ ಚರಣದ ಸೇವೆಯ 
ಕರುಣಿಸಬೇಕೆಂದು ತರುಣಿಯರು |
ಪರಿಪರಿಯಲಿ ನಿನ್ನ ಸ್ಮರಿಸಿ ಹಾರೈಪರು 
ಪುರಂದರ ವಿಠಲ ನೀನೇಳು ಶ್ರೀ ಹರಿಯೇ ||೫||

raMganAyaka rAjIvalOcana ramaNane beLagAyitELennuta ||pa|| 
aMgane lakumi tA patiyanebbisidaLu 
SRuMgArada nidde sAkennuta ||apa||
 
pakShirAjanu baMdu bAgiloLage niMdu 
akShi teredu bEga IkShiseMdu |
pakShi jAtigaLella cilipiliguTTuta 
sUkShmadali ninna smarisuvavO kRuShNa ||1||
 
sanaka sanaMdana sanatsujAtaru baMdu 
vinayadiM kara mugidu Olaiparu |
Gana Suka Saunaka vyAsa vAlmIkaru 
nenedu nenedu koMDADuvarO hariyE ||2||
 
suraru kinnararu kiMpuruSharu uragaru 
paripariyali ninna smarisuvarO ||
aruNanu baMdu udayAcaladali niMdu kiraNa 
tOruvanu BAskaranu SrIhariyE ||3||
 
padumanABane ninna nAmAmRutavannu 
padumAkShiyaru tamma gRuhadoLage |
udayadoLeddu savidADutta pADutta 
dadhiya kaDevarELu madhusUdana kRuShNa ||4||
 
muramathananE ninna caraNada sEveya 
karuNisabEkeMdu taruNiyaru |
paripariyali ninna smarisi hAraiparu 
puraMdara viThala nInELu SrI hariyE ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru