ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ವೆಂಕಟೇಶ ಬೇಡಿಕೊಂಬೆ | ಪುರಂದರ ವಿಠಲ | Venkatesha Bedikombe | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ|ಪ|
ಬ್ರಹ್ಮ ಶಂಕರಾದಿ ಮುನಿವಂದ್ಯ ಎನಗೆ ಮುಕ್ತಿ ತೋರಿಸೋ|ಅಪ|

ನಷ್ಟ ಮೊದಲಾದಂಥ ಕಷ್ಟ ಬಿಡಿಸೋ| 
ನಿನ್ನ ಪಟ್ಟದರಾಣಿಗೆ ಹೇಳಿ ಎನಗೆ ಪದವಿ ಕೊಡಿಸೋ|
ಇಷ್ಟ ಭಕ್ತ ಜನರೊಳು ಎನ್ನ ಸೇರಿಸೋ 
ಈ ಸೃಷ್ಟಿಯೊಳು ನಿನ್ನ ದಾಸರ ದಾಸನೆನಿಸೋ|೧|

ಉಟ್ಟು ಉಂಡು ಮಿಕ್ಕಿದ್ದೆಲ್ಲ ಎನಗೆ ಹಾಕಿಸೋ 
ಪೊಂಬಟ್ಟಲೊಳಗಿನ ಹಾಲು ಉಚ್ಛಿಷ್ಟ ಹಾಕಿಸೋ|
ಗಟ್ಟಿಯಾಗಿ ಸಕ್ಕರೆ ತುಪ್ಪ ರೊಟ್ಟಿ ಉಣ್ಣಿಸೋ| 
ಮುಂದೆ ಹುಟ್ಟಿ ಬಹ ಜನ್ಮಂಗಳ ಎನಗೆ ಬಿಡಿಸೋ|೨|

ಕಿಟ್ಟಗಟ್ಟಿದ ಕಬ್ಬಿಣಕ್ಕೆ ಪುಟವ ಹಾಕಿಸೋ| 
ಉತ್ಕೃಷ್ಟ ಬಂಗಾರದೊಳು ಎನ್ನ ಸೇರಿಸೋ|
ಬೆಟ್ಟಿಗೆ ಉಂಗುರ ಮಾಡಿ ಎನ್ನ ಧರಿಸೋ ಸ್ವಾಮಿ| 
ದಿಟ್ಟ ಪುರಂದರ ವಿಠಲನೆ ದಯದಿ ಪಾಲಿಸೋ|೩|

veMkaTESa bEDikoMbe kRupeya pAlisO|pa|
brahma SaMkarAdi munivaMdya enage mukti tOrisO|apa|
 
naShTa modalAdaMtha kaShTa biDisO| 
ninna paTTadarANige hELi enage padavi koDisO|
iShTa Bakta janaroLu enna sErisO 
I sRuShTiyoLu ninna dAsara dAsanenisO|1|
 
uTTu uMDu mikkiddella enage hAkisO 
poMbaTTaloLagina hAlu ucChiShTa hAkisO|
gaTTiyAgi sakkare tuppa roTTi uNNisO| 
muMde huTTi baha janmaMgaLa enage biDisO|2|
 
kiTTagaTTida kabbiNakke puTava hAkisO| 
utkRuShTa baMgAradoLu enna sErisO|
beTTige uMgura mADi enna dharisO svAmi| 
diTTa puraMdara viThalane dayadi pAlisO|3|

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru