ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ವೇಣುನಾದ ಬಾರೋ | ಪುರಂದರ ವಿಠಲ | Venu Naada Baaro | Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ವೇಣುನಾದ ಬಾರೋ ವೆಂಕಟರಮಣನೆ ಬಾರೋ || ಪ ||
ಬಾಣನ ಭಂಗಿಸಿದಂಥ ಭಾವಜನಯ್ಯನೆ ಬಾರೋ || ಅಪ ||

ಪೂತನಿಯ ಮೊಲೆಯುಂಡ ನವನೀತ ಚೋರನೇ ಬಾರೋ
ಭೀತ ರಾವಣನ ಸಂಹರಿಸಿದ ಸೀತಾನಾಯಕ ಬಾರೋ || ೧ ||

ಬಿಲ್ಲ ಮುರಿದು ಮಲ್ಲರ ಗೆದ್ದ ಫುಲ್ಲನಾಭನೆ ಬಾರೋ
ಗೊಲ್ಲತೇರೊಡನೆ ನಲಿವ ಚೆಲುವ ಮೂರುತಿ ಬಾರೋ || ೨ ||

ಮಂದರಗಿರಿ ಎತ್ತಿದಂಥ ಇಂದಿರೆ ರಮಣನೆ ಬಾರೋ
ಕುಂದದೆ ಗೋವುಗಳ ಕಾಯ್ದ ಪುಂಡರೀಕಾಕ್ಷನೆ ಬಾರೋ || ೩ ||

ನಾರಿಯರ ಮನೆಗೆ ಪೋಗುವ ವಾರಿಜನಾಭನೆ ಬಾರೋ
ಈರೇಳು ಭುವನವ ಕಾಯುವ ಮಾರನಯ್ಯನೆ ಬಾರೋ || ೪ ||

ಶೇಷಶಯನ ಮೂರುತಿಯಾದ ವಾಸುದೇವನೆ ಬಾರೋ
ದಾಸರೊಳು ದಾಸನಾದ ಪುರಂದರ ವಿಠಲನೆ ಬಾರೋ || ೫ ||

vENunaada baarO veMkaTaramaNane baarO || pa ||
baaNana bhaMgisidaMtha bhaavajanayyane baarO || apa ||

pUtaniya moleyuMDa navanIta cOranE baarO
bhIta raavaNana saMharisida sItaanaayaka baarO || 1 ||

billa muridu mallara gedda Pullanaabhane baarO
gollatEroDane naliva celuva mUruti baarO || 2 ||

maMdaragiri ettidaMtha iMdire ramaNane baarO
kuMdade gOvugaLa kaayda puMDarIkaakShane baarO || 3 ||

naariyara manege pOguva vaarijanaabhane baarO
IrELu bhuvanava kaayuva maaranayyane baarO || 4 ||

shEShashayana mUrutiyaada vaasudEvane baarO
daasaroLu daasanaada puraMdara viThalane baarO || 5 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru