ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಂದಾ ಶ್ರೀ ಕೃಷ್ಣ | ಹಯವದನ | Banda Sri Krishna | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)


ಬಂದಾ ಶ್ರೀ ಕೃಷ್ಣ ನಲಿಯುತ್ತ ನಸು ನಗೆ-
ಯಿಂದ ಬೇಗ ಯಶೋದೆಯಿದ್ದೆಡೆಗೆ ||ಪ||

ಉದಯದೊಳೆದ್ದು ಮೊಸರ ಕಡೆವಾಗ ತನ್ನ
ಅದುಭುತ ಬಾಲಲೀಲೆಗಳ ಪಾಡೆ
ಮುದದಿ ನಯನದಿ ಜಲ ತುಳುಕಾಡುತಿರೆ ಕಂಡು
ಮದನನಯ್ಯನು ನಚ್ಚಿ ಬೆಣ್ಣೆಯ ಬೇಡುತ್ತ||೧||

ಮಕ್ಕಳುಗಳ ಕೂಡಿ ಮನೆಮನೆಯೊಳಗಾಡಿ
ಮಿಕ್ಕುಮೀರಿದ ರಕ್ಕಸರನೀಡ್ಯಾಡಿ
ಅಕ್ಕರಿಂದಲಿ ತಾಯಮುಖವನೀಕ್ಷಿಸುತಲಿ
ಗಕ್ಕನೆ ಸೆರಗ ಪಿಡಿದು ಮೊಲೆಯ ಕೊಡೆನ್ನುತ||೨||

ಕುರುಳಕೂದಲು ಅರಳೆಲೆ ಮಾಗಾಯಿ
ಕೊರಳ ಪದಕಹಾರ ಎಸೆಯುತಿರೆ
ಚರಣದಂದುಗೆ ಗೆಜ್ಜೆ ಘಲುಘಲುಕೆನ್ನುತಲಿ
ಸಿರಿಯರಸ ಹಯವದನನೆನಿಪ ಮೋಹನಾಂಗ||೩||


baMdA SrI kRuShNa naliyutta nasu nage-
yiMda bEga yaSOdeyiddeDege ||pa||
   
udayadoLeddu mosara kaDevaaga tanna
adubhuta baalalIlegaLa paaDe
mudadi nayanadi jala tuLukaaDutire kaMDu
madananayyanu nachchi beNNeya bEDutta||1||

makkaLugaLa kUDi manemaneyoLagaaDi
mikkumIrida rakkasaranIDyaaDi
akkariMdali taayamukhavanIkShisutali
gakkane seraga piDidu moleya koDennuta||2||

kuruLakUdalu araLele maagaayi
koraLa padakahaara eseyutire
charaNadaMduge gejje ghalughalukennutali
siriyarasa hayavadananenipa mOhanaaMga||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru