ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ದಾಸನಾಗಬೇಕು ಸದಾಶಿವನ | ಕಾಗಿನೆಲೆಯಾದಿ ಕೇಶವ | Dasanagabeku Sadashivana | Sri Kanaka Dasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanakadasaru


ದಾಸನಾಗಬೇಕು ಸದಾಶಿವನ ದಾಸನಾಗಬೇಕು ||ಪ||

ದಾಸನಾಗಬೇಕು ಕ್ಲೇಶ ಪಂಚಕವಳಿದು ಆಶೆಯಲಿ
ಮನಸೂಸದೆ ಸರ್ವದಾ ||ಅಪ||

ಮನದ ಕಲ್ಮಷ ಕಳೆದು ಮಹಾದೇ-
ವನ ಮಹಿಮೆಯ ತಿಳಿದು 
ಇನಿತು ಈ ಜಗವೆಲ್ಲ ಈಶ್ವರಮಯವೆಂದು 
ಘನವಾದ ಮೋಹದ ಗಡಿಯನ್ನು ದಾಟುತ್ತ ||೧||

ತನುವು ಅಸ್ಥಿರವೆನ್ನುತ ತಿಳಿದು ಶಂಕ-
ರನ ಹೃದಯದಿ ಕಾಣುತ 
ಘನವಾದ ಇಂದ್ರಜಾಲದ ಮಾಯೆಯೆನ್ನುತ 
ಬಿನುಗು ಸಂಸಾರದ ಮಮತೆಯನು ಬಿಡುತ ||೨||

ಆರು ಚಕ್ರದಿ ಮೆರೆವ ಅಖಂಡನ 
ಮೂರು ಗುಣವ ತಿಳಿದು 
ಆರು ಮೂರು ಹದಿನಾರು ತತ್ತ್ವವ ಮೀರಿ 
ತೋರುವ ಕಾಗಿನೆಲೆಯಾದಿ ಕೇಶವನಡಿ ||೩||

daasanaagabEku sadaaSivana daasanaagabEku ||pa||

daasanaagabEku klESa paMcakavaLidu ASeyali
manasUsade sarvadaa ||apa||

manada kalmaSha kaLedu mahaadE-
vana mahimeya tiLidu 
initu I jagavella IshvaramayaveMdu 
Ganavaada mOhada gaDiyannu daaTutta ||1||

tanuvu asthiravennuta tiLidu SaMka-
rana hRudayadi kaaNuta 
Ganavaada iMdrajaalada maayeyennuta 
binugu saMsaarada mamateyanu biDuta ||2||

Aru chakradi mereva aKaMDana 
mUru guNawa tiLidu 
Aru mUru hadinaaru tattvava mIri 
tOruva kaagineleyaadi kESavanaDi ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru