ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಧರ್ಮಕ್ಕೆ ಕೈ ಬಾರದೀ ಕಾಲ | ಪುರಂದರ ವಿಠಲ | Dharmakke Kai Baradikala | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಧರ್ಮಕ್ಕೆ ಕೈ ಬಾರದೀ ಕಾಲ 
ಪಾಪ ಕರ್ಮಕ್ಕೆ ಮನ ಸೋಲೋದೀ ಕಲಿಕಾಲ ||ಪ||

ದಂಡ ದ್ರೋಹಕೆ ಉಂಟು, ಪುಂಡು ಪೋಕರಿಗುಂಟು 
ಹೆಂಡತಿ ಮಕ್ಕಳಿಗಿಲ್ಲೀ ಕಾಲ ||
ದಿಂಡೇರಿಗುಂಟು ಜಗಭಂಡರಿಗುಂಟು |
ಅಂಡಲೆವರಿಗಿಲ್ಲ ಈ ಕಾಲ ||೧||

ಮತ್ತೆ ಸುಳ್ಳರಿಗುಂಟು ನಿತ್ಯ ಹಾದರಕುಂಟು |
ಉತ್ತಮರಿಗಿಲ್ಲ ಈ ಕಾಲ ||
ತೊತ್ತೇರಿಗುಂಟು ತಾಟಕಿಗುಂಟು |
ಹೆತ್ತ ತಾಯಿಗಿಲ್ಲ ಈ ಕಾಲ ||೨||

ಹುಸಿ ದಿಟವಾಯಿತು ರಸಕಸವಾಯಿತು |
ಸೊಸೆ ಅತ್ತೆಯ ದಂಡಿಸೋದೀ ಕಾಲ ||
ಬಿಸಜಾಕ್ಷ ಪುರಂದರ ವಿಠಲನ |
ಮನದಲ್ಲಿ ಸ್ತುತಿಸುವವರಿಗಿಲ್ಲ ಈ ಕಾಲ ||೩||

dharmakke kai bAradI kAla 
pApa karmakke mana sOlOdI kalikAla ||pa||
 
daMDa drOhake uMTu, puMDu pOkariguMTu 
heMDati makkaLigillI kAla ||
diMDEriguMTu jagaBaMDariguMTu |
aMDalevarigilla I kAla ||1||
 
matte suLLariguMTu nitya hAdarakuMTu |
uttamarigilla I kAla ||
tottEriguMTu tATakiguMTu |
hetta tAyigilla I kAla ||2||
 
husi diTavAyitu rasakasavAyitu |
sose atteya daMDisOdI kAla ||
bisajAkSha puraMdara viThalana |
manadalli stutisuvavarigilla I kAla ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru