ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಹರಿ ಹರಿಯೆನ್ನಲಿಕ್ಕೆ ಹೊತ್ತಿಲ್ಲ | ಶ್ರೀ ಪುರಂದರ ವಿಠಲ | Hari Hariyennalikke | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಹರಿ ಹರಿಯೆನ್ನಲಿಕ್ಕೆ ಹೊತ್ತಿಲ್ಲ ಈ
ನರಜನ್ಮ ವ್ಯರ್ಥವಾಗಿ ಹೋಗುತದಲ್ಲ ||ಪ||

ಹರಿ ಜಾಗರಣೆಯಲ್ಲಿ ಪಾರಣೆ ಚಿಂತೆ
ನಿರತ ಯಾತ್ರೆಯಲ್ಲಿ ಶಾಕದ ಚಿಂತೆ
ಸರುವ ಸತ್ಕಾರ್ಯದಿ ಧನದ ಮೇಲಿನ ಚಿಂತೆ
ಪುರಾಣ ಕೇಳುವಾಗ ಗೃಹದ ಚಿಂತೆ ||೧||

ಕರ್ಮದಿ ಒಂದು ಚಿಂತೆ ಧರ್ಮದಿ ಒಂದು ಚಿಂತೆ
ಪೆರ್ಮನ ಮಾಡಲು ಬಲು ಚಿಂತೆ
ವರ್ಮ ವೈರದಿ ಚಿಂತೆ ಈರ್ಮನಸ್ಸಾಗೆ ಚಿಂತೆ
ದುರ್ಮದದಿ ನಡೆಯೆ ಪ್ರಾಣದ ಚಿಂತೆ ||೨||

ಗಂಗೆ ಮುಳುಗುವಾಗ ಚೆಂಬು ಮೇಲಿನ ಚಿಂತೆ
ಸಂಗಡದವರು ಪೋಗುವ ಚಿಂತೆ
ಪನ್ನಗಶಯನ ಶ್ರೀಪುರಂದರವಿಠಲನ್ನ
ಹಿಂಗದೆ ಭಜಿಸಲು ಸತತ ನಿಶ್ಚಿಂತೆ ||೩||

hari hariyennalikke hottilla I
narajanma vyarthavaagi hOgutadalla ||pa||

hari jaagaraNeyalli paaraNe ciMte
nirata yaatreyalli Saakada ciMte
saruva satkaaryadi dhanada mElina ciMte
puraaNa kELuvaaga gRuhada ciMte ||1||

karmadi oMdu ciMte dharmadi oMdu ciMte
permana maaDalu balu ciMte
varma vairadi ciMte Irmanassaage ciMte
durmadadi naDeye praaNada ciMte ||2||

gaMge muLuguvaaga ceMbu mElina ciMte
saMgaDadavaru pOguva ciMte
pannagaSayana SrIpuraMdaraviThalanna
hiMgade bhajisalu satata niSciMte ||3||
 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru