ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಜಾಲಿಯ ಮರದಂತೆ | ಪುರಂದರ ವಿಠಲ | Jaaliya Maradante | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಜಾಲಿಯ ಮರದಂತೆ ಧರೆಯೊಳಗೆ ದುರ್ಜನರು ||ಪ||
ಮೂಲಾಗ್ರ ಪರ್ಯಂತ ಮುಳ್ಳು ಕೂಡಿಪ್ಪಂತೆ ||ಅಪ||

ಬಿಸಿಲಲಿ ಬಳಲಿ ಬಂದವರಿಗೆ ನೆರಳಿಲ್ಲ |
ಹಸಿದು ಬಂದವರಿಗೆ ಹಣ್ಣು ಇಲ್ಲ | 
ಕುಸುಮ ವಾಸನೆ ಇಲ್ಲ | ಕೂಡಲು ಸ್ಥಳವಿಲ್ಲ | 
ರಸದಲ್ಲಿ ಸ್ವಾದವು ವಿಷದಂತೆ ಇರುತಿಹ || ೧ ||

ಊರ ಹಂದಿಗೆ ಷಡ್ರಸಾನ್ನವನಿಕ್ಕಲು   
ನಾರುವ ದುರ್ಗಂಧ ಬಿಡುವುದುಂಟೇ ||  
ಘೋರಪಾಪಿಗೆ ತತ್ವಜ್ಞಾನವ ಹೇಳಿದರೆ    
ಕ್ರೂರ ಕರ್ಮವ ಬಿಟ್ಟು ಸುಜನನಾಗುವನೆ ||೨||  

ತನ್ನಿಂದ ಉಪಕಾರ ತೊಟಕಾದರೂ ಇಲ್ಲ |
ಬಿನ್ನಾಣದ ಮಾತಿಗೆ ಕೊನೆಯಿಲ್ಲವೋ  ||  
ಅನ್ನಕ್ಕೆ ಸೇರಿದ ಕುನ್ನಿ ಮಾನವರಂತೆ | 
ಇನ್ನಿವರ ಕಾರ್ಯವು ಪುರಂದರವಿಠಲ ||೩|| 

jAliya maradaMte dhareyoLage durjanaru ||pa||
mUlAgra paryaMta muLLu kUDippaMte ||apa||
 
bisilali baLali baMdavarige neraLilla |
hasidu baMdavarige haNNu illa | 
kusuma vAsane illa | kUDalu sthaLavilla | 
rasadalli svAdavu vishadante irutiha || 1 ||
 
Ura haMdige shaDrasAnnavanikkalu
nAruva durgaMdha biDuvudunte ||
ghOra paapige tattvaj~jaanava hELidare 
krUra karmava biTTu sujananAguvane ||2||
 
tanniMda upakAra toTakAdarU illa |
binnaNada maatige koneyillavO ||
annakke sErida kunni mAnavarante |
innivara kAryavu purandara vithala ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru