ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನೀ ಮಾಯೆಯೊಳಗೊ | ಕಾಗಿನೆಲೆ ಆದಿಕೇಶ | Ni Maayeyolago | Sri Kanaka Dasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanakadasaru


ನೀ ಮಾಯೆಯೊಳಗೊ ನಿನ್ನೊಳು ಮಾಯೆಯೊ ||ಪ|| 
ನೀ ದೇಹದೊಳಗೋ ನಿನ್ನೊಳು ದೇಹವೋ ||ಅಪ|| 

ಬಯಲು ಆಲಯದೊಳಗೊ ಆಲಯವು ಬಯಲೊಳಗೋ | 
ಬಯಲು ಆಲಯವೆರಡು ನಯನದೊಳಗೊ || 
ನಯನ ಬುದ್ಧಿಯ ಒಳಗೋ | ಬುದ್ಧಿ ನಯನದ ಒಳಗೋ | 
ನಯನ ಬುದ್ಧಿಗಳೆರಡು ನಿನ್ನೊಳಗೋ ಕೃಷ್ಣಾ ||೧||

ಸವಿಯು ಸಕ್ಕರೆಯೊಳಗೊ ಸಕ್ಕರೆಯು ಸವಿಯೊಳಗೋ | 
ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೋ || 
ಜಿಹ್ವೆ ಮನಸಿನ ಒಳಗೋ ಮನಸು ಜಿಹ್ವೆಯ ಒಳಗೋ | 
ಜಿಹ್ವೆ ಮನಸುಗಳೆರಡು ನಿನ್ನೊಳಗೋ ಕೃಷ್ಣಾ ||೨|| 

ಕುಸುಮದೊಳು ಗಂಧವೋ ಗಂಧದಲಿ ಕುಸುಮವೋ | 
ಕುಸುಮ ಗಂಧಗಳೆರಡು ಆಘ್ರಾಣದೊಳಗೋ |  
ಅಸಮಭವ ಕಾಗಿ ನೆಲೆ ಆದಿಕೇಶವರಾಯ |  
ಉಸುರುರೆನ್ನಳವಲ್ಲ ಎಲ್ಲ ನಿನ್ನೊಳಗೋ ಕೃಷ್ಣಾ ||೩|| 

nI mAyeyoLago ninnoLu mAyeyo ||pa|| 
nI dEhadoLagO ninnoLu dEhavO ||apa|| 
  
bayalu AlayadoLago Alayavu bayaloLagO | 
bayalu AlayaveraDu nayanadoLago || 
nayana buddhiya oLagO | buddhi nayanada oLagO | 
nayana buddhigaLeraDu ninnoLagO kRuShNA ||1||
   
saviyu sakkareyoLago sakkareyu saviyoLagO | 
saviyu sakkareyeraDu jihveyoLagO || 
jihve manasina oLagO manasu jihveya oLagO | 
jihve manasugaLeraDu ninnoLagO kRuShNA ||2|| 

kusumadoLu gaMdhavO gaMdhadali kusumavO | 
kusuma gaMdhagaLeraDu AGrANadoLagO |  
asamaBava kAgi nele AdikESavarAya |  
usururennaLavalla ella ninnoLagO kRuShNA ||3|| 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru