ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಿನ್ನ ನಾಮವಿದ್ದರೆ ಸಾಕೋ | ಪುರಂದರ ವಿಠಲ | Ninna Namaviddare Sako | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ನಿನ್ನ ನಾಮವಿದ್ದರೆ ಸಾಕೋ ||ಪ||

ಮುನಿದರೆ ಮುನಿ ನಿನ್ನಾಣೆ ಶ್ರೀ ರಾಮ ||ಅಪ||

ಹೊದ್ದಿದ ಪಾಪವನೆಲ್ಲ ಛಿನ್ನ  
ಛಿದ್ರವ ಮಾಡಿ ಖಂಡಿಸಿ ಬಿಡುವ 
ಎದ್ದರೆ ಸಂಗಡ ಬರುವ ಎನ್ನ  
ಮುದ್ದಿಸಿ ಮುಂದಕೆ ಮುಕ್ತಿಯ ಕೊಡುವ ||೧||

ಸಾರೆ ಸಂಗಡ ಬರುವ ಎನ್ನ  
ಸೇರಿದ ಪಾಪವ ಕೋಪದಿ ತರಿವ 
ಝಾಢಿಸಿ ಕರ್ಮವ ಕಳೆವ ಎನ್ನ ಸಂ-
ಗಡ ಕೂಡಿಕೊಂಡು ವೈಕುಂಠಕ್ಕೆ ನಡೆವ ||೨||

ಪರಮಾನಂದವನೀವ ನಿನ್ನ 
ಸ್ಮರಣೆ ಎಂಬುದು ಎನ್ನ ಜೀವಕ್ಕೆ ಜೀವ  
ವರ ಕೊಡುವುದೊಂದು ಭಾವ ಈ 
ಪರಿಪುಸಿಯಲ್ಲ ಪುರಂದರ ವಿಠಲ ||೩||

ninna naamaviddare saakO ||pa||

munidare muni ninnaaNe shrI raama ||apa||

hoddida paapavanella Cinna  
Cidrava maaDi KaMDisi biDuva 
eddare saMgaDa baruva enna  
muddisi muMdake muktiya koDuva ||1||

saare saMgaDa baruva enna  
sErida paapava kOpadi tariva 
JADhisi karmava kaLeva enna saM-
gaDa kUDikoMDu vaikuMThakke naDeva ||2||

paramaanaMdavanIva ninna 
smaraNe eMbudu enna jIvakke jIva  
vara koDuvudoMdu bhaava I 
paripusiyalla puraMdara viThala ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru