ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ವರಗುರು ಉಪದೇಶ | ಪುರಂದರ ವಿಠಲ | Varaguru Upadesha | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ವರಗುರು ಉಪದೇಶ ನೆರವಾಯಿತೆನಗೀಗ ಇನ್ನೇನಿನ್ನೇನು ||ಪ||
ಹರಿದಾಸರ ಸಂಗ ದೊರಕಿತು ಎನಗೀಗ ಇನ್ನೇನಿನ್ನೇನು ||ಅಪ||

ಮಾಯದ ಸಂಸಾರ ಮಮಕಾರ ಹಿಂಗಿತು ಇನ್ನೇನಿನ್ನೇನು ||
ತೋಯಜಾಕ್ಷನ ನಾಮ ಜಿಹ್ವೆಯೊಳ್ ನೆಲೆಸಿತು ಇನ್ನೇನಿನ್ನೇನು ||೧||

ಹಲವು ದೈವಗಳೆಂಬೊ ಹಂಬಲ ಬಿಟ್ಟಿತು ಇನ್ನೇನಿನ್ನೇನು ||
ಜಲಜನಾಭನ ನಾಮ ಹೃದಯದೊಳ್ ನೆಲೆಸಿತು ಇನ್ನೇನಿನ್ನೇನು ||೨||

ತಂದೆ ತಾಯಿ ಮುಚುಕುಂದ ವರದನಾದ ಇನ್ನೇನಿನ್ನೇನು ||
ಸಂದೇಹವಿಲ್ಲ ಮುಕುಂದ ದಯ ಮಾಡಿದ ಇನ್ನೇನಿನ್ನೇನು ||೩||

ಏನೆಂದು ಪೇಳಲಿ ಆನಂದ ಸಂಭ್ರಮ ಇನ್ನೇನಿನ್ನೇನು ||
ನಂದಗೋಪನ ಕಂದನ ಮಹಿಮೆಯ ಇನ್ನೇನಿನ್ನೇನು ||೪||

ಎನ್ನ ವಂಶಗಳೆಲ್ಲ ಪಾವನವಾದವು ಇನ್ನೇನಿನ್ನೇನು ||
ಚಿನ್ಮಯ ಪುರಂದರ ವಿಠಲಯ್ಯ ದೊರಕಿದ ಇನ್ನೇನಿನ್ನೇನು ||೫||

varaguru upadESa neravAyitenagIga innEninnEnu ||pa||
haridAsara saMga dorakitu enagIga innEninnEnu ||apa||
 
mAyada saMsAra mamakAra hiMgitu innEninnEnu ||
tOyajAkShana nAma jihveyoL nelesitu innEninnEnu ||1||
 
halavu daivagaLeMbo haMbala biTTitu innEninnEnu ||
jalajanABana nAma hRudayadoL nelesitu innEninnEnu ||2||
 
taMde tAyi mucukuMda varadanAda innEninnEnu ||
saMdEhavilla mukuMda daya mADida innEninnEnu ||3||
 
EneMdu pELali AnaMda saMBrama innEninnEnu ||
naMdagOpana kaMdana mahimeya innEninnEnu ||4||
 
enna vaMSagaLella pAvanavAdavu innEninnEnu ||
cinmaya puraMdara viThalayya dorakida innEninnEnu ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru