ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಆರು ಬದುಕಿದರಯ್ಯ | ಕಾಗಿನೆಲೆಯಾದಿ ಕೇಶವ | Aaru Badukidarayya | Sri Kanaka Dasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanaka Dasaru


ಆರು ಬದುಕಿದರಯ್ಯ ಹರಿ ನಿನ್ನ ನಂಬಿ||ಪ||
ತೋರು ಈ ಧರೆಯೊಳಗೆ ಒಬ್ಬರನು ಕಾಣೆ ಕೃಷ್ಣ ||ಅಪ||

ಕಲಹ ಬಾರದ ಮುನ್ನ ಕರ್ಣನೊಬ್ಬನ ಕೊಂದೆ
ಸುಲಭದಲಿ ಕೌರವರ ಮನೆಯ ಮುರಿದೆ
ನೆಲವ ಬೇಡಲು ಹೋಗಿ ಬಲಿಯ ಭೂಮಿಗೆ ತುಳಿದೆ
ಮೊಲೆಯನುಣ್ಣಲು ಪೋಗಿ ಪೂತನಿಯ ಕೊಂದೆ ||೧||

ಕರುಳೊಳಗೆ ಕತ್ತರಿಯನಿಟ್ಟೆ ಹಂಸಧ್ವಜನ
ಸರಸದಿಂ ಮಗಳ ಗಂಡನ ಕೊಲಿಸಿದೆ
ಮರುಳಿನಿಂದಲಿ ಪೋಗಿ ಭೃಗುಮುನಿಯ ಕಣ್ಣೊಡೆದೆ
ಅರಿತು ನರಕಾಸುರನ ಹೆಂಡಿರನು ತಂದೆ ||೨||

ತಿರಿದುಂಬೊ ದಾಸರ ಕೈಯ ಕಪ್ಪ ಕೊಂಬ ಮರ್ಮ
ತಿರುಮಲಾಚಾರ್ಯ ಶ್ರೀಗುರುವೆ ಬಲ್ಲ
ವರ ಕಾಗಿನೆಲೆಯಾದಿಕೇಶವನ ಭಜಿಸಿದರೆ
ತಿರಿವೆನೆಂದರು ತಿರುಪೆ ಕೂಳ್ ಪುಟ್ಟದೈ ಕೃಷ್ಣ ||೩||

Aru badukidarayya hari ninna naMbi||pa||
tOru I dhareyoLage obbaranu kaaNe kRuShNa ||apa||

kalaha baarada munna karNanobbana koMde
sulabhadali kouravara maneya muride
nelava bEDalu hOgi baliya bhUmige tuLide
moleyanuNNalu pOgi pUtaniya koMde ||1||

karuLoLage kattariyaniTTe haMsadhwajana
sarasadiM magaLa gaMDana koliside
maruLiniMdali pOgi bhRugumuniya kaNNoDede
aritu narakaasurana heMDiranu taMde ||2||

tiriduMbo daasara kaiya kappa koMba marma
tirumalaachaarya shrIguruve balla
vara kaagineleyaadikEshavana bhajisidare
tiriveneMdaru tirupe kUL puTTadai kRuShNa ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru