ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಾರೋ ಕೃಷ್ಣಯ್ಯ | ಶ್ರೀ ನೆಲೆಯಾದಿಕೇಶವ | Baaro Krishnayya | Sri Kanaka Dasaru


ಸಾಹಿತ್ಯ : ಶ್ರೀ ಕನಕದಾಸರು
Kruti:   Sri Kanakadasaru


ಬಾರೋ ಕೃಷ್ಣಯ್ಯ ನಿನ್ನ ಭಕ್ತರ ಮನೆಗೀಗ ಕೃಷ್ಣಯ್ಯ || ಪ. ||
ಬಾರೋ ನಿನ್ನ ಮುಖ ತೋರೋ ನಿನ್ನ ಸರಿ ಯಾರೋ ಜಗದಲಿ ಶ್ರೀಹರಿ  || ಅ.ಪ. ||

ಅಂದುಗೆ ಪಾಡಗ ಕಾಲಂದುಗೆ ಕಿರುಗೆಜ್ಜೆ 
ಧಿಂ ಧಿಮಿ ಧಿಮಿ ಧಿಮಿ ಧಿಮಿಕೆನ್ನುತ | 
ಪೊಂಗೊಳಲನೂದುತ ಬಾರಯ್ಯ || ೧ ||

ಕಂಕಣ ಕರದಲ್ಲಿ ಹೊನ್ನುಂಗುರ ಹೊಳೆಯುತ 
ಕಿಂಕಿಣಿ ಕಿಣಿ ಕಿಣಿ ಕಿಣಿರೆನ್ನುತ |
ಪೊಂಗೊಳಲೂದುತ ಬಾರಯ್ಯ ಬಾರೋ ಕೃಷ್ಣಯ್ಯ || ೨ ||

ವಾಸಾ ಉಡುಪಿ ಶ್ರೀ ನೆಲೆಯಾದಿ ಕೇಶವನ 
ದಾಸಾ ನಿನ್ನ ಪದ ದಾಸಾ |
ನಿನ್ನ ಪದ ದಾಸ ಸಲಹಲು ಬಾರಯ್ಯ || ೩ ||

bArO kRuShNayya ninna bhaktara manegIga kRuShNayya || pa. ||
bArO ninna mukha tOrO ninna sari yArO jagadali shrIhari || a.pa. ||

aMduge pADaga kAlaMduge kirugejje 
dhim dhimi dhimi dhimi dhimikennuta |
poMgoLalanUduta baarayya || 1 ||

kaMkaNa karadalli honnuMgura hoLeyuta 
kiMkiNi kiNi kiNi kiNirennuta |
poMgoLalUduta bArayya bArO kriShNayya || 2 ||

vAsA uDupi shri neleyAdi kEshavana 
dAsA ninna pada dAsA |
ninna pada dAsA salahalu bArayya || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru