ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಂದದ್ದೊಂದು ಚಂದ ಸಾಲದೆ | ಪುರಂದರ ವಿಠಲ | Bandaddondu Chanda | Sri Purandara Dasaru



ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಬಂದದ್ದೊಂದು ಚಂದ ಸಾಲದೆ ಗೋವಿಂದನು ||ಪ||

ವಿಕಟಾಂಗಿ ಪೂತನಿಯ ಕೊಂದು ಶಕಟಾಸುರನ ಕಾಲಲಿ ತುಳಿದು
ಧಿಕ್ಕುಟ ಧಿಕ್ಕುಟ ಧಿಕ್ಕುಟ ಎನ್ನುತ ಅಕ್ಕರೆಯಿಂದಲಿ ಕುಣಿಯುತ ಮನೆಗೆ ||೧||

ಗೋವರ್ಧನ ಪರ್ವತನೆತ್ತಿ ಗೋವುಗಳನ್ನೆ ಕಾಯ್ದು ತನ್ನ
ಮಾವ ಕಂಸನನ್ನು ಕೊಂದು ಆವಕೂಡಿ ಆಡುತ ಮನೆಗೆ ||೨||

ಸರ್ವತ್ರದಿ ವ್ಯಾಪ್ತನಾದ ಸರ್ವದೋಷ ರಹಿತನಾದ
ಸರ್ವವಂದ್ಯ ಪುರಂದರವಿಠಲನು ಸರ್ವಕಾಲದಿ ರಕ್ಷಿಸುವನು ||೩||

baMdaddoMdu CaMda saalade gOviMdanu ||pa||

vikaTaaMgi pUtaniya koMdu SakaTaasurana kaalali tuLidu
dhikkuTa dhikkuTa dhikkuTa ennuta akkareyiMdali kuNiyuta manege ||1||

gOvardhana parvatanetti gOvugaLanne kaaydu tanna
maava kaMsanannu koMdu aavakUDi aaDuta manege ||2||

sarvatradi vyaaptanaada sarvadOSha rahitanaada
sarvavaMdya puraMdaraviThalanu sarvakaaladi rakShisuvanu ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru