ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಭಾಗ್ಯದ ಲಕ್ಷ್ಮೀ ಬಾರಮ್ಮ | ಪುರಂದರ ವಿಠಲ | Bhagyada Lakshmi Baramma | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಭಾಗ್ಯದ ಲಕ್ಷ್ಮೀ ಬಾರಮ್ಮ ||ಪ||
ನಮ್ಮಮ್ಮ ನೀ ಸೌಭಾಗ್ಯದ ಲಕ್ಷ್ಮೀ ಬಾರಮ್ಮ ||ಅಪ|| 

ಹೆಜ್ಜೆಯ ಮೇಲೊಂದು ಹೆಜ್ಜೆಯನಿಕ್ಕುತ 
ಗೆಜ್ಜೆಯ ಕಾಲ್ಗಳ ನಾದವ ತೋರುತ ||
ಸಜ್ಜನ ಸಾಧು ಪೂಜೆಯ ವೇಳೆಗೆ 
ಮಜ್ಜಿಗೆಯೊಳಗಿನ ಬೆಣ್ಣೆಯಂತೆ ||೧||   

ಕನಕವೃಷ್ಟಿಯ ಕರೆಯುತ ಬಾರೇ | 
ಮನ ಕಾಮನೆಯ ಸಿದ್ಧಿಯ ತೋರೆ || 
ದಿನಕರ ಕೋಟಿ ತೇಜದಿ ಹೊಳೆಯುವ 
ಜನಕರಾಯನ ಕುಮಾರಿ ಬೇಗ ||೨|| 

ಸಂಖ್ಯೆಯಿಲ್ಲದ ಭಾಗ್ಯವ ಕೊಟ್ಟು |
ಕಂಕಣ ಕೈಯ್ಯ ತಿರುವುತ ಬಾರೇ || 
ಕುಂಕುಮಾಂಕಿತೆ ಪಂಕಜಲೋಚನ 
ವೆಂಕಟರಮಣನ ಬಿಂಕದ ರಾಣಿ ||೩|| 

ಅತ್ತಿತ್ತಗಲದೆ ಭಕ್ತರ ಮನೆಯಲಿ 
ನಿತ್ಯ ಮಹೋತ್ಸವ ನಿತ್ಯ ಸುಮಂಗಲ || 
ಸತ್ಯದಿ ತೋರುವ ಸಾಧು ಸಜ್ಜನರ 
ಚಿತ್ತದಿ ಹೊಳೆಯುವ ಪುತ್ಥಳಿ ಗೊಂಬೆ ||೪||   

ಸಕ್ಕರೆ ತುಪ್ಪದ ಕಾಲುವೆ ಹರಿಸಿ 
ಶುಕ್ರವಾರದ ಪೂಜೆಯ ವೇಳೆಗೆ | 
ಅಕ್ಕರೆಯುಳ್ಳ ಅಳಗಿರಿ ರಂಗನ 
ಚೊಕ್ಕ ಪುರಂದರ ವಿಠಲನ ರಾಣಿ ||೫|| 

BAgyada lakShmI bAramma ||pa||
nammamma nI sauBAgyada lakShmI bAramma ||apa|| 
  
hejjeya mEloMdu hejjeyanikkuta 
gejjeya kAlgaLa nAdava tOruta ||
sajjana sAdhu pUjeya vELege 
majjigeyoLagina beNNeyaMte ||1||   

kanakavRuShTiya kareyuta bArE | 
mana kAmaneya siddhiya tOre || 
dinakara kOTi tEjadi hoLeyuva 
janakarAyana kumAri bEga ||2|| 
  
saMKyeyillada BAgyava koTTu |
kaMkaNa kaiyya tiruvuta bArE || 
kuMkumAMkite paMkajalOcana 
veMkaTaramaNana biMkada rANi ||3|| 
  
attittagalade Baktara maneyali 
nitya mahOtsava nitya sumaMgala || 
satyadi tOruva sAdhu sajjanara 
cittadi hoLeyuva putthaLi goMbe ||4||   

sakkare tuppada kAluve harisi 
SukravArada pUjeya vELege | 
akkareyuLLa aLagiri raMgana 
chokka puraMdara viThalana rANi ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru