ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಎಲ್ಲಮ್ಮ ಎನಬೇಡವೇ | ವಿಜಯ ವಿಠ್ಠಲ | Ellamma Enabedave | Sri Vijaya Dasaru


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ಎಲ್ಲಮ್ಮ ಎನಬೇಡವೇ ಸಿರಿದೇವಿ ಎಲ್ಲರಮ್ಮನಲ್ಲವೆ
ಬಲ್ಲಿದರಾಗಿಪ್ಪ ಬೊಮ್ಮಾದಿಗಳಿಗೆ ಶ್ರೀ ಲಕುಮಿಯೆ ಅಮ್ಮನಲ್ಲದೆ ಮತ್ತಿಲ್ಲ ||ಪ||

ಆಲದೆಲೆಯ ಮೇಲೆ ತನ್ನ ಪುರುಷನಂದು
ಕಾಲವರಿತು ಪವಡಿಸಿರಲು
ವಾಲಗವನು ಮಾಡಿ ಕೊಂಡಾಡಿ ಜೀವರ
ಮೂಲ ಕರ್ಮಂಗಳು ತೀರುವಂತೆ ಮಾಡಿದ ||೧||

ಅಮೋಘ ವೀರ್ಯ ಗರ್ಭದಿ ಧರಿಸಿ ತಾ
ಬೊಮ್ಮಾಂಡವನೆ ಪೆತ್ತ ಲೋಕಾಮಾತಾ
ಸುಮನಸರಿಗೆ ಕಡೆಗಣ್ಣ ನೋಟದಿ
ಆ ಮಹಾ ಪದವಿಯ ಕೊಡುವ ಭಾಗ್ಯವಂತೆ ||೨||

ಎರಡೊಂದು ಗುಣದಲ್ಲಿ ಪ್ರವಿಷ್ಠಳಾಗಿ ಜೀ
ವರ ಯೋಗ್ಯತೆಯಂತೆ ಪಾಲಿಸುತಿಪ್ಪಳು
ಪರಮ ಪುರುಷ ನಮ್ಮ ವಿಜಯವಿಠ್ಠಲನ್ನ
ಕರುಣದಿಂದಲಿ ಅನಂತ ಕಲ್ಪಕೆ ನಿತ್ಯ ||೩||

ellamma enabEDavE siridEvi ellarammanallave
ballidaraagippa bommaadigaLige shrI lakumiye ammanallade mattilla ||pa||

Aladeleya mEle tanna puruShanaMdu
kaalavaritu pavaDisiralu
vaalagavanu maaDi koMDaaDi jIvara
mUla karmaMgaLu tIruvaMte maaDida ||1||

amOGa vIrya garbhadi dharisi taa
bommaaMDavane petta lOkaamaataa
sumanasarige kaDegaNNa nOTadi
A mahaa padaviya koDuva bhaagyavaMte ||2||

eraDoMdu guNadalli praviShThaLaagi jI
vara yOgyateyaMte paalisutippaLu
parama puruSha namma vijayaviThThalanna
karuNadiMdali anaMta kalpake nitya ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru