ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಈತ ಲಿಂಗದೇವ ಶಿವನು | ಹೆಳವನಕಟ್ಟೆ ಗಿರಿಯಮ್ಮ | Ita Linga Deva | Sri Helavanakatte Giriyamma


ಸಾಹಿತ್ಯ : ಶ್ರೀ ಹೆಳವನಕಟ್ಟೆ ಗಿರಿಯಮ್ಮ 
Kruti    : Sri Helavanakatte Giriyamma


ಈತ ಲಿಂಗದೇವ ಶಿವನು ಆತ ರಂಗಧಾಮ ವಿಷ್ಣು
ಮಾತನಾಡೋ ಮಂಕು ಮನುಜಾ ಮನದಹಂಕಾರ ಬಿಟ್ಟು ||ಪ||

ವೇದಕೆ ಸಿಲುಕದಾತನೀತಾ ವೇದ ನಾಲ್ಕು ತಂದನಾತಾ
ಬೂದಿ ಮೈಯೊಳು ಧರಿಸಿದನೀತಾ ಇದ್ದ ಗಿರಿಯ ಪೊದ್ದನಾತಾ ||೧||

ವ್ಯಾಧನಾಗಿ ಒಲಿದನೀತಾ ಮಾಧವಾ ಮಧುಸೂದನಾತಾ
ಮದನನ್ನ ಉರುಹಿದನೀತಾ ಮದನ ಪುತ್ರನ ಪಡೆದಾತನಾತ ||೨||

ಗಂಗೆಯ ಪೊತ್ತಾತನೀತಾ ಹಾಂಗೆ ಗರುಡಗಮನನಾತಾ
ತುಂಗ ಹೆಳವನಕಟ್ಟಿ ಲಿಂಗನೀತಾ ರಂಗನಾಥಾ ||೩|| 

Ita liMgadEva Sivanu Ata raMgadhaama viShNu
maatanaaDO maMku manujaa manadahaMkaara biTTu ||pa||

vEdake silukadaatanItaa vEda naalku taMdanaataa
bUdi maiyoLu dharisidanItaa idda giriya poddanaataa ||1||

vyaadhanaagi olidanItaa maadhavaa madhusUdanaataa
madananna uruhidanItaa madana putrana paDedaatanaata ||2||

gaMgeya pottaatanItaa haaMge garuDagamananaataa
tuMga heLavanakaTTi liMganItaa raMganaathaa ||3|| 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru