ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕೈಲಾಸ ವಾಸ ಗೌರೀಶ ಈಶ | ವಿಜಯ ವಿಠ್ಠಲ | Kailasavasa Gowrisha Isha | Sri Vijaya Dasaru


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ಕೈಲಾಸ ವಾಸ ಗೌರೀಶ ಈಶ ||ಪ||
ತೈಲಧಾರೆಯಂತೆ ಮನಸು ಕೊಡು ಹರಿಯಲ್ಲಿ ಶಂಭೋ ||ಅಪ||

ಅಹೋ ರಾತ್ರಿಯಲಿ ನಾನು ಅನುಚರಾಗ್ರಣಿಯಾಗಿ |
ಮಹಿಯೊಳಗೆ ಚರಿಸಿದೆನೋ ಮಹದೇವನೆ ||
ಅಹಿಭೂಷಣನೆ ಎನ್ನ ಅವಗುಣಗಳೆಣಿಸದಲೆ |
ವಿಹಿತ ಧರ್ಮದಿ ವಿಷ್ಣು ಭಕುತಿಯನು ಕೊಡು ಶಂಭೋ ||೧||

ಮನಸು ಕಾರಣವಲ್ಲ ಪಾಪಪುಣ್ಯಕ್ಕೆಲ್ಲ |
ಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೆ ||
ದನುಜ ಮದಗಜ ಅರಿಯೆ ದಂಡ ಪ್ರಣಮವ ಮಾಳ್ಪೆ |
ಮಣಿಸು ಈ ಮನಸು ಸಜ್ಜನರ ಸಿರಿ ಚರಣದಲಿ ||೨||

ಭಾಗೀರಥೀಧರನೆ ಭಯವ ಪರಿಹರಿಸಯ್ಯ | ಲೇ - 
ಸಾಗಿ ಒಲಿದೆನಗೆ ಶರ್ವದೇವನೇ ||
ಭಾಗವತ ಜನಪ್ರೀಯ ವಿಜಯ ವಿಠ್ಠಲನಂಘ್ರಿ 
ಜಾಗು ಮಾಡದೆ ಭಜಿಪ ಭಾಗ್ಯವನೆ ಕೊಡು ಶಂಭೋ ||೩||

kailAsa vAsa gaurISa ISa ||pa||
tailadhAreyaMte manasu koDu hariyalli SaMBO ||apa||
 
ahO rAtriyali nAnu anucarAgraNiyAgi |
mahiyoLage carisidenO mahadEvane ||
ahiBUShaNane enna avaguNagaLeNisadale |
vihita dharmadi viShNu Bakutiyanu koDu SaMBO ||1||
 
manasu kAraNavalla pApapuNyakkella |
analAkSha ninna prEraNeyillade ||
danuja madagaja ariye daMDa praNamava mALpe |
maNisu I manasu sajjanara siri caraNadali ||2||
 
BAgIrathIdharane Bayava pariharisayya | lE - 
sAgi olidenage SarvadEvanE ||
BAgavata janaprIya vijaya viThThalanaMGri 
jAgu mADade Bajipa BAgyavane koDu SaMBO ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru