ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕುಲ ಕುಲ ಕುಲವೆನ್ನುತಿಹರು | ಶ್ರೀ ಕನಕದಾಸರು | Kula Kula Kulavennutiharu | Sri Kanaka Dasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanakadasaru


ಕುಲ ಕುಲ ಕುಲವೆನ್ನುತಿಹರು ||ಪ||
ಕುಲ ಯಾವುದು ಸತ್ಯಸುಖವುಳ್ಳ ಜನರಿಗೆ ||ಅಪ|| 

ಕೆಸರೊಳು ತಾವರೆ ಪುಟ್ಟಲು ಅದ ತಂದು 
ಕುಸುಮನಾಭನಿಗರ್ಪಿಸಲಿಲ್ಲವೇ || 
ಹಸುವಿನ ಮಾಂಸದೊಳ್ ಉತ್ಪತ್ತಿ ಕ್ಷೀರವು, 
ವಸುಧೆಯೊಳಗೆ ಭೂಸುರರುಣಲಿಲ್ಲವೇ ||೧||  

ಮೃಗಗಳ ಮೈಯಲ್ಲಿ ಹುಟ್ಟಿದ ಕಸ್ತೂರಿ 
ತೆಗೆದು ಪೂಸುವರು ಭೂಸುರರು || 
ಒಗೆಯಿಂದ ನಾರಾಯಣ ಯಾತರ ಕುಲದವ, 
ಅಗಜೆ ವಲ್ಲಭನು ಯಾತರ ಕುಲದವನು ||೨||   

ಆತ್ಮ ಯಾವ ಕುಲ, ಜೀವ ಯಾವ ಕುಲ, 
ತತ್ವೇಂದ್ರಿಯಗಳ ಕುಲ ಪೇಳಿರಯ್ಯ ||  
ಆತ್ಮಾಂತರಾತ್ಮ ನೆಲೆಯಾದಿ ಕೇಶವ, 
ಆತನೊಲಿದ ಮೇಲೆ ಯಾತರ ಕುಲವಯ್ಯ ||೩||

kula kula kulavennutiharu ||pa||
kula yAvudu satyasuKavuLLa janarige ||apa|| 

kesaroLu tAvare puTTalu ada taMdu 
kusumanABanigarpisalillavE || 
hasuvina mAMsadoL utpatti kShIravu, 
vasudheyoLage BUsuraruNalillavE ||1||  

mRugagaLa maiyalli huTTida kastUri 
tegedu pUsuvaru BUsuraru || 
ogeyiMda nArAyaNa yAtara kuladava, 
agaje vallaBanu yAtara kuladavanu ||2||   

Atma yAva kula, jIva yAva kula, 
tatvEMdriyagaLa kula pELirayya ||  
AtmAMtarAtma neleyAdi kESava, 
Atanolida mEle yAtara kulavayya ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru