ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಲೊಳಲೊಟ್ಟೆ ಎಲ್ಲಾ ಲೊಳಲೊಟ್ಟೆ | ಪುರಂದರ ವಿಠಲ | Lolalotte Ella Lolalotte | Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಲೊಳಲೊಟ್ಟೆ ಎಲ್ಲಾ ಲೊಳಲೊಟ್ಟೆ ||ಪ|| 

ಆನೆ ಕುದುರೆ ಒಂಟೆ ಲೊಳಲೊಟ್ಟೆ ಬಹು ಸೇನೆ ಭಂಡಾರವು ಲೊಳಲೊಟ್ಟೆ ||
ಮಾನಿನಿಯರ ಸಂಗ ಲೊಳಲೊಟ್ಟೇ ದೊಡ್ಡ ಕ್ಷೋಣೀಶನೇಂಬುದು ಲೊಳಲೊಟ್ಟೆ ||೧||   

ಮುತ್ತು ಮಾಣಿಕ್ಯ ಲೊಳಲೊಟ್ಟೆ ಚಿನ್ನ ಛತ್ರ ಚಾಮರ ಧ್ವಜ ಲೊಳಲೊಟ್ಟೆ ||
ಸುತ್ತಗಲ ಕೋಟೆ ಲೊಳಲೊಟ್ಟೆ ಮತ್ತೆ ಉತ್ತಮ ಪ್ರಭುತ್ವ ಲೊಳಲೊಟ್ಟೆ ||೨|| 

ಕಂಟಕರೆಂಬೋರು ಲೊಳಲೊಟ್ಟೆ ನಿನ್ನ ನೆಂಟರು ಇಷ್ಟರು ಲೊಳಲೊಟ್ಟೆ ||
ಉಂಟಾದ ಗುಣ ನಿಧಿ ಪುರಂದರ ವಿಠಲನ ಭಂಟನಾಗದವ ಲೊಳಲೊಟ್ಟೆ ||೩||

loLaloTTe ellA loLaloTTe ||pa|| 
  
Ane kudure oMTe loLaloTTe bahu sEne BaMDAravu loLaloTTe ||
mAniniyara saMga loLaloTTE doDDa kShONISanEMbudu loLaloTTe ||1||   

muttu mANikya loLaloTTe chinna Catra cAmara dhvaja loLaloTTe ||
suttagala kOTe loLaloTTe matte uttama praButva loLaloTTe ||2|| 
  
kaMTakareMbOru loLaloTTe ninna neMTaru iShTaru loLaloTTe ||
uMTAda guNa nidhi puraMdara viThalana BaMTanAgadava loLaloTTe ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru