ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮರೆಯದಿರು ಮರೆಯದಿರು | ಶ್ರೀ ಕನಕದಾಸರು | Mareyadiru Mareyadiru | Sri Kanakadasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanakadasaru


ಮರೆಯದಿರು ಮರೆಯದಿರು ಮರುಳು ಮನುಜಾ
ನಾರಾಯಣನ ಸ್ಮರಣೆಯನು ಮಾಡು ಮನುಜ ||ಪ|| 

ರಂಗನಾಥನು ಇರಲಿಕ್ಕೆ ಜಂಗುಳಿದೈವಗಳೇಕೆ
ತುಂಗಭದ್ರೆ ಇರಲಿಕ್ಕೆ ಬಾವಿಕೆರೆಯೇಕೆ
ಅಂಗನೆ ಸತಿ ಇರಲಿಕ್ಕೆ ಬಣಗು ಹೆಣ್ಣುಗಳೇಕೆ
ಮಂಗಳಾತ್ಮನಿರಲಿಕ್ಕೆ ಪರದೈವವೇಕೆ ||೧||

ಹಾಲುಹಳ್ಳವಿರಲಿಕ್ಕೆ ವಾಳಿಯವ ತರಲೇಕೆ
ಮೇಲುನಾಮವಿರಲಿಕ್ಕೆ ಕಟಕು ಇನ್ನೇಕೆ
ಬಾಲಹನುಮನಿರಲಿಕ್ಕೆ ಹುಲುಕಪಿಗಳೇಕೆ
ಮೇಲಾದ ತುಳಸಿ ಇರೆ ಕಗ್ಗೊರಲೆಯೇಕೆ ||೨||

ಚಿನ್ನದ ಗಿರಿಯಿರಲಿಕ್ಕೆ ಕಬ್ಬಿಣದ ಮೊರಡಿಯೇಕೆ
ರನ್ನಮಾಣಿಕವಿರೆ ಕಾಜಿನ ಹರಳೇಕೆ
ಅನ್ನತುಪ್ಪವಿರಲಿಕ್ಕೆ ಮದ್ಯಪಾನಗಳೇಕೆ
ಚೆನ್ನಾದಿಕೇಶವನಿರೆ ಬಿನುಗುದೈವಗಳೇಕೆ ||೩||

mareyadiru mareyadiru maruLu manujaa
naaraayaNana smaraNeyanu maaDu manuja ||pa|| 

raMganaathanu iralikke jaMguLidaivagaLEke
tuMgabhadre iralikke baavikereyEke
aMgane sati iralikke baNagu heNNugaLEke
maMgaLaatmaniralikke paradaivavEke ||1||

haaluhaLLaviralikke vaaLiyava taralEke
mElunaamaviralikke kaTaku innEke
baalahanumaniralikke hulukapigaLEke
mElAda tuLasi ire kaggoraleyEke ||2||

chinnada giriyiralikke kabbiNada moraDiyEke
rannamaaNikavire kaajina haraLEke
annatuppaviralikke madyapaanagaLEke
chennaadikEshavanire binugudaivagaLEke ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru