ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಒಂಭತ್ತು ಹೂವಿಗೆ ಒಂದೇ | ಶ್ರೀ ಕನಕದಾಸರು | Ombhattu Hoovige | Sri Kanaka Dasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanakadasaru


ಒಂಭತ್ತು ಹೂವಿಗೆ ಒಂದೇ ನಾಳವು ಚಂದಮಾಮ || ಪ ||
ತುಂಬಿನಾಳ ತುದಿ ತುಂಬಿ ಭಾನುಪ್ರಭೆ ಚಂದಮಾಮ || ಅಪ||

ಕದರು ಗಾತರ ಕಂಬ ತೆಕ್ಕೆಗಾತರ ಹೂವು ಚಂದಮಾಮ 
ಆನೆ ಗಾತರ ಕಾಯಿ ಒಂಟೆ ಗಾತರ ಹಣ್ಣು ಚಂದಮಾಮ || ೧ ||

ಕಾಲಿಲ್ಲದಾತನು ಹತ್ತಿದನಾ ಮರವನು ಚಂದಮಾಮ
ಕೈಯಿಲ್ಲದಾತನು ಕೊಯ್ದನಾ ಹಣ್ಣನು ಚಂದಮಾಮ || ೨ ||

ನೆತ್ತಿಲ್ಲದಾತನು ಹೊತ್ತನು ಹಣ್ಣ ಚಂದಮಾಮ
ತಳವಿಲ್ಲದಾ ಗೂಡೆಯಲ್ಲಿ ಇಳಿಸಿದನಾ ಹಣ್ಣ ಚಂದಮಾಮ || ೩ ||

ಮಾರ್ಗ ತಪ್ಪಿ ಮಾರ್ಗ ಹಿಡಿದು ನಡೆದರು ಚಂದಮಾಮ
ಸದ್ದಿಲ್ಲದ ಸಂತೇಲಿ ಇಳಿಸಿದರಾ ಹಣ್ಣ ಚಂದಮಾಮ || ೪ ||

ರೊಕ್ಕವಿಲ್ಲದಾತ ಕೊಂಡನಾ ಹಣ್ಣ ಚಂದಮಾಮ
ಮೂಗಿಲ್ಲದಾತ ಮೂಸಿದನಾ ಹಣ್ಣ ಚಂದಮಾಮ || ೫ ||

ಕಣ್ಣಿಲ್ಲದಾತನು ಕೆಂಪಾನೆ ಹಣ್ಣೆಂದ ಚಂದಮಾಮ
ಅಂಗುಳಿಲ್ಲದಾತ ನುಂಗಿದನಾ ಹಣ್ಣ ಚಂದಮಾಮ || ೬ ||

ಬಾಯಿಲ್ಲದಾತ ತಿಂದು ಬಸಿರಲಿಂಬಿಟ್ಟ ಚಂದಮಾಮ
ಸುಲಭ ಪದವಿದು ನಳಿನಜಾಂಡದೊಳು ಚಂದಮಾಮ || ೭ ||

ಗುರುವಿನ ಮಹಿಮೆ ಗುರುವೇ ತಾ ಬಲ್ಲನು ಚಂದಮಾಮ
ಮೂಢನಾದವನೇನು ಬಲ್ಲನು ಈ ಮಾತು ಚಂದಮಾಮ || ೮ ||

ಕನಕನಾಡಿದ ಗುಟ್ಟು ಆದಿಕೇಶವ ಬಲ್ಲ ಚಂದಮಾಮ
ತಿಳಿದವರು ಹೇಳಿರಿ ಹಳೆಗನ್ನಡವ ಚಂದಮಾಮ || ೯ ||

oMbhattu hUvige oMdE naaLavu caMdamaama || pa ||
tuMbinaaLa tudi tuMbi bhaanuprabhe caMdamaama || apa||

kadaru gaatara kaMba tekkegaatara hUvu caMdamaama 
Ane gaatara kaayi oMTe gaatara haNNu caMdamaama || 1 ||

kaalilladaatanu hattidanaa maravanu caMdamaama
kaiyilladaatanu koydanaa haNNanu caMdamaama || 2 ||

nettilladaatanu hottanu haNNa caMdamaama
taLavilladaa gUDeyalli iLisidanaa haNNa caMdamaama || 3 ||

maarga tappi maarga hiDidu naDedaru caMdamaama
saddillada saMtEli iLisidaraa haNNa caMdamaama || 4 ||

rokkavilladaata koMDanaa haNNa caMdamaama
mUgilladaata mUsidanaa haNNa caMdamaama || 5 ||

kaNNilladaatanu keMpaane haNNeMda caMdamaama
aMguLilladaata nuMgidanaa haNNa caMdamaama || 6 ||

baayilladaata tiMdu basiraliMbiTTa caMdamaama
sulabha padavidu naLinajaaMDadoLu caMdamaama || 7 ||

guruvina mahime guruvE taa ballanu caMdamaama
mUDhanaadavanEnu ballanu I maatu caMdamaama || 8 ||

kanakanaaDida guTTu AdikEshava balla caMdamaama
tiLidavaru hELiri haLegannaDava caMdamaama || 9 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru