ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ರಾಮನಾಮ ಪಾಯಸಕ್ಕೆ | ಪುರಂದರ ವಿಠಲ | Rama nama payasakke | Sri Purandara Vithala


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ರಾಮನಾಮ ಪಾಯಸಕ್ಕೆ ಕೃಷ್ಣನಾಮ ಸಕ್ಕರೆ ||ಪ||
ವಿಠಲ ನಾಮ ತುಪ್ಪವ ಬೆರೆಸಿ ಬಾಯಿ ಚಪ್ಪರಿಸಿರೋ ||ಅಪ||

ಒಮ್ಮನ ಗೋಧಿಯ ತಂದು | ವೈರಾಗ್ಯ ಕಲ್ಲಲಿ ಬೀಸಿ ||
ಸುಮ್ಮನೆ ಸಜ್ಜಿಗೆ ತೆಗೆದು ಸಣ್ಣ ಸೇವಿಗೆಯ ಹೊಸೆದು ||೧||

ಹೃದಯವೆಂಬೋ ಪಾತ್ರೆಯೊಳಗೆ | ಭಾವವೆಂಬೋ ಎಸರು ಇಟ್ಟು ||
ಬುದ್ಧಿಯಿಂದ ಪಾಕವ ಮಾಡಿ ಹರಿವಾಣದೊಳಗೆ ನೀಡಿ ||೨||

ಆನಂದ ಆನಂದವೆಂಬೋ ತೇಗು ಬಂದ ಪರಿಯಲಿ ||
ಆನಂದ ಮೂರುತಿ ನಮ್ಮ ಪುರಂದರ ವಿಠಲನ ನೆನೆಯಿರೋ ||೩||

rAmanAma pAyasakke kRuShNanAma sakkare ||pa||
viThala nAma tuppava beresi bAyi capparisirO ||apa||
 
ommana gOdhiya taMdu | vairAgya kallali bIsi ||
summane sajjige tegedu saNNa sEvigeya hosedu ||1||
 
hRudayaveMbO pAtreyoLage | BAvaveMbO esaru iTTu ||
buddhiyiMda pAkava mADi harivANadoLage nIDi ||2||
 
AnaMda AnaMdaveMbO tEgu baMda pariyali ||
AnaMda mUruti namma puraMdara viThalana neneyirO ||3||

 

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru