ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ರತುನ ದೊರಕಿತಲ್ಲ | ರಚನೆ - ಜಗನ್ನಾಥ ದಾಸರು | Ratuna Dorakitalla | Jagannatha Dasara Kruti


ಸಾಹಿತ್ಯ : ಶ್ರೀ ಜಗನ್ನಾಥ ದಾಸರು (ಜಗನ್ನಾಥ ವಿಠಲ)
Kruti:Sri Jagannatha Dasaru (Jagannatha vittala)


ರತುನ ದೊರಕಿತಲ್ಲ ಎನಗೆ ದಿವ್ಯ-
ರತುನ ದೊರಕಿತಲ್ಲ||ಪ||

ರತುನ ದೊರಕಿತು ಎನ್ನ ಜನ್ಮ ಪ-
ವಿತ್ರವಾಯಿತು ಈ ದಿನವು ನಾ
ಯತನಗೈಯುತ ಬರುತಿರಲು ಪ್ರ-
ಯತನವಿಲ್ಲದೆ ವಿಜಯರಾಯರೆಂಬ ||ಅಪ||

ಪಥದೀ ನಾ ಬರುತಿರಲು ಥಳಥಳವೆಂದು
ಅತಿಕಾಂತಿ ಝಳಪಿಸಲು ಬೆರಗಾಗುತ
ಅತಿಚೋದ್ಯವ ಕಾಣಲು ಸೇವಿಸುತಿರೆ
ಸತತ ಕರಪಿಡಿದಾದರಿಸಿ ಮನೋ
ರಥವ ಪೂರೈಸುತಲಿ ದಿವ್ಯ ಸ-
ನ್ಮತಿಯ ಪಾಲಿಸಿ ಮೋಕ್ಷಸುಪಥವ
ಅತಿಶಯದಿ ತೋರುತಲಿ ಪೊರೆಯುವ ||೧||

ಜ್ಞಾನವೆಂಬೋ ಪುತ್ಥಳಿ ಕಂಬಿಯಲಿ
ಆಣಿಮುತ್ತಿನ ಭಕ್ತಿಲಿ ಸುಕೃತಮಾಲಾ
ನಾನಾ ವಿಧ ಹವಳದಲಿ ಸೇರಿಸುತಿರೆ
ಪ್ರಾಣಪದಕವೆಂಬೊ ಮಾಲಾನು-
ಮಾನವಿಲ್ಲದೆ ಕೊರಳಿಗ್ಹಾಕುತ
ಗಾನದಿಂ ಕುಣಿಯುತಲಿ ಪಾಡುತ
ದೀನಜನರುದ್ಧಾರ ಗೈಯುವ ||೨||

ಶೋಧಿಸಿ ಗ್ರಂಥಗಳ ಸುಳಾದಿಯ
ಮೋದದಿಂದಲಿ ಬಹಳ ಕವಿತೆ ಮಾಡಿ
ಸಾಧುಜನಕೆ ಸುಕಾಲ ಆನಂದವಿತ್ತು
ವಾದಿ ಜನರನು ಗೆದ್ದು ವಾದಿಸಿ
ಮಾಧವ ಜಗನ್ನಾಥವಿಠಲನ
ಪಾದಕಮಲಕೆ ಮಧುಪನಂದದಿ
ಸಾದರದಿ ತೋರಿಸುತ ಮೆರೆಯುವ ||೩||

ratuna dorakitalla enage divya-
ratuna dorakitalla||pa||

ratuna dorakitu enna janma pa-
vitravaayitu I dinavu naa
yatanagaiyuta barutiralu pra-
yatanavillade vijayaraayareMba ||apa||

pathadI naa barutiralu thaLathaLaveMdu
atikaaMti jhaLapisalu beragaaguta
atichOdyava kaaNalu sEvisutire
satata karapiDidaadarisi manO
rathava pUraisutali divya sa-
nmatiya paalisi mOkShasupathava
atishayadi tOrutali poreyuva ||1||

j~jaanaveMbO putthaLi kaMbiyali
ANimuttina bhaktili sukRutamaalaa
naanaa vidha havaLadali sErisutire
praaNapadakaveMbo maalaanu-
maanavillade koraLig~haakuta
gaanadiM kuNiyutali paaDuta
dInajanaruddhaara gaiyuva ||2||

shOdhisi graMthagaLa suLaadiya
mOdadiMdali bahaLa kavite maaDi
saadhujanake sukaala aanaMdavittu
vaadi janaranu geddu vaadisi
maadhava jagannaathaviThalana
paadakamalake madhupanaMdadi
saadaradi tOrisuta mereyuva ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru