ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ವೃಂದಾವನದ ಸೇವೆಯ | ಶ್ರೀ ವಾದಿರಾಜರು | Vrundavanada Seveya | Sri Vadirajaru


ಸಾಹಿತ್ಯ : ಶ್ರೀ ವಾದಿರಾಜರು (ಹಯವದನ)
Kruti:Sri Vadirajaru (Hayavadana)



ವೃಂದಾವನದ ಸೇವೆಯ ಮಾಡಿ ||ಪ||

ವೃಂದಾವನದ ಸೇವೆಮಾಡಿದವರಿಗೆ ಭೂ -
ಬಂಧನ ಬಿಡುಗಡೆಯಾಗುವುದು ||ಅಪ||

ಏಳುತಾಲಿದಿರೆ ಕಂಡು ಕರವ ಮುಗಿದು ಬೇಗೀ-
ರೇಳು ಲೋಕದ ಮಾತೆಗೆ ನಮೋಯೆಂಬೋದಲ್ಲದೆ
ಏಳು ಪ್ರದಕ್ಷಿಣೆಯನು ಮಾಡಿದವರಿಗೆ
ಏಳು ಜನ್ಮದ ಪಾಪ ಹಿಂಗುವುದು ||೧||

ಸಾರಿಸಿ ರಂಗವಲ್ಲಿಯನಿಟ್ಟು ಮೇಲೆ ಪ-
ನ್ನೀರನೆರೆದು ಪ್ರತಿದಿವಸದಲ್ಲಿ
ಸಾರಿ ಸೇವೆಯ ಮಾಡಿದವರಿಗೊಲಿದು ಮುನ್ನ
ಸೇರಿಸುವಳು ತನ್ನ ಪದವಿಯನು ||೨||

ಒಡೆಯನ ಮನೆಗೆ ನೀರುತರುತಲೊಬ್ಬಳು
ಎಡಹಿ ಬಿದ್ದಳು ತನ್ನ ಕೊಡನೊಡೆಯೆ
ಸಿಡಿದು ಶ್ರೀತುಳಸಿಗೆ ತಂಪಾಗಲು ಮುನ್ನ
ಕೊಡಳೆ ಅವಳಿಗೆ ಮೋಕ್ಷಪದವಿಯನು ||೩||

ಕೇಶವ ಎಂಬ ಭೂಸುರಗೆ ಶುಕಯೋಗಿ ಉಪ-
ದೇಶಿಸಿದನು ತನ್ನ ಭಾಗವತದಲ್ಲಿ
ಕಾಸುವೀಸ ಹೊನ್ನು ಹಣ ಸವೆಯದಾಮುನ್ನ ನಿ-
ರಾಶೆಯಿಂದಲಿ ಮುಕ್ತಿ ದೊರಕುವುದು ||೪||

ಪೊಡವಿಗಧಿಕವಾದ ಸೋದೆ ಪುರದ ತ್ರಿವಿಕ್ರಮ
ಎಡಭಾಗದಲಿ ಲಕ್ಷ್ಮೀದೇವಿಯ ಸಹಿತ
ಸಡಗರದಿಂದಲ್ಲಿ ಹಯವದನನ ಪಾದ
ಬಿಡದೆ ಪೂಜಿಸಿ ಭಕ್ತಿ ಪಡೆವಿರಯ್ಯ ||೫||

vRuMdaavanada sEveya maaDi ||pa||

vRuMdaavanada sEvemaaDidavarige bhU -
baMdhana biDugaDeyaaguvudu ||apa||

ELutaalidire kaMDu karava mugidu bEgI-
rELu lOkada maatege namOyeMbOdallade
ELu pradakShiNeyanu maaDidavarige
ELu janmada paapa hiMguvudu ||1||

saarisi raMgavalliyaniTTu mEle pa-
nnIraneredu pratidivasadalli
saari sEveya maaDidavarigolidu munna
sErisuvaLu tanna padaviyanu ||2||

oDeyana manege nIrutarutalobbaLu
eDahi biddaLu tanna koDanoDeye
siDidu shrItuLasige taMpaagalu munna
koDaLe avaLige mOkShapadaviyanu ||3||

kEshava eMba bhUsurage shukayOgi upa-
dEshisidanu tanna bhaagavatadalli
kaasuvIsa honnu haNa saveyadaamunna ni-
raasheyiMdali mukti dorakuvudu ||4||

poDavigadhikavaada sOde purada trivikrama
eDabhaagadali lakShmIdEviya sahita
saDagaradiMdalli hayavadanana paada
biDade pUjisi bhakti paDevirayya ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru