ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಂದ ನೋಡಿ ಗೋವಿಂದ ಕೃಷ್ಣ | ಪುರಂದರ ವಿಠಲ | Banda nodi govinda | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಬಂದ ನೋಡಿ ಗೋವಿಂದ ಕೃಷ್ಣ ಬಂದ ನೋಡಿ ||ಪ||

ಬಂದ ಬಂದ ಆನಂದತೀರ್ಥ ಮುನೀಂದ್ರ 
ವಂದ್ಯ ಹರಿ ನಂದ ಮುಕುಂದನು ||ಅಪ||

ಸರಸಿಜಾಕ್ಷ ಹರಿಯೇ ಸರ್ವರ ಪೊರೆವ ದಯಾನಿಧಿಯೇ || 
ಕರಿಯವರದ ಚಕ್ರದಿ ಉದ್ಧರಿಸಿದ 
ಹರಿ ನಮ್ಮ ಪಾಲಿಪ ಪಾಲ್ಗಡಲೊಡೆಯ ||೧||

ಇಂದ್ರದೇವ ವಂದ್ಯ ಇಷ್ಟರ ಇಂದು ಕಾಯುವ ನಿತ್ಯಾ-
ನಂದ ಚಂದ್ರಕೋಟಿ ಲಾವಣ್ಯ ಮುಖದಲಿ 
ಸುಂದರ ಅರಳೆಲೆ ಹಾರಗಳಿಂದಲಿ ||೨||

ಚರಣ ಕಮಲವಂತೆ ಸರ್ವದಾ ಮಾಳ್ಪುದು ದಯವಂತೆ || 
ತರತರ ಜನರಿಗೆ ಕರೆದು ವರವೀವ 
ಸರಸಿಜಾಕ್ಷ ನಮ್ಮ ಪುರಂದರ ವಿಠಲನು ||೩||

baMda nODi gOviMda kRuShNa baMda nODi ||pa||

baMda baMda AnaMdatIrtha munIMdra 
vaMdya hari naMda mukuMdanu ||apa||

sarasijaakSha hariyE sarvara poreva dayaanidhiyE || 
kariyavarada cakradi uddharisida 
hari namma paalipa paalgaDaloDeya ||1||

iMdradEva vaMdya iShTara iMdu kaayuva nityaa-
naMda caMdrakOTi laavaNya muKadali 
suMdara araLele haaragaLiMdali ||2||

caraNa kamalavaMte sarvadaa maaLpudu dayavaMte || 
taratara janarige karedu varavIva 
sarasijaakSha namma puraMdara viThalanu ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru