ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಂದಾನು ರಾಘವೇಂದ್ರ | ಶ್ರೀ ಮಧ್ವೇಶ ವಿಠ್ಠಲ | Bandanu Raghavendra | Sri Madhwesha Vithala


ರಚನೆ :ಶ್ರೀ ಮಧ್ವೇಶ ವಿಠಲ ದಾಸರು 
Kriti :Sri Madhwesha Vittala Dasaru  


ಬಂದಾನು ರಾಘವೇಂದ್ರ ಇಂದಿಲ್ಲಿಗೆ ||ಪ||

ಕಂದನ ಮೊರೆ ಕೇಳಿ ಜನನಿಯು ಬರುವಂತೆ ||ಅಪ||

ಗಜವೇರಿ ಬಂದ ಜಗದಿ ತಾ ನಿಂದ |
ಅಜಪಿತ ರಾಮನ ಪದಾಬ್ಜ ಸ್ಮರಿಸುತಲಿ ||೧||

ಹರಿಯ ಕುಣಿಸುತ ಬಂದ ನರಹರಿ ಪ್ರಿಯ ಬಂದ |
ಶರಣಾಗತರನು ಕರವ ಪಿಡಿವೆನೆಂದು ||೨||

ಪ್ರಹ್ಲಾದ ವ್ಯಾಸ ಮುನೀಂದ್ರ ರಾಘವೇಂದ್ರ |
ನಿಲಿಸುತ ಮನವ ಮಧ್ವೇಶ ವಿಠ್ಠಲನಲ್ಲಿ ||೩||

baMdaanu raaGavEMdra iMdillige ||pa||

kaMdana more kELi jananiyu baruvaMte ||apa||

gajavEri baMda jagadi taa niMda |
ajapita raamana padaabja smarisutali ||1||

hariya kuNisuta baMda narahari priya baMda |
sharaNaagataranu karava piDiveneMdu ||2||

prahlaada vyaasa munIMdra raaGavEMdra |
nilisuta manava madhvEsha viThThalanalli ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru