ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ದಾಸನ್ನ ಮಾಡಿಕೋ ಎನ್ನ | ಪುರಂದರ ವಿಠಲ | Dasanna Madiko Enna | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ದಾಸನ್ನ ಮಾಡಿಕೋ ಎನ್ನ ಸ್ವಾಮಿ
ಸಾಸಿರ ನಾಮದ ವೇಂಕಟರಮಣ ||ಪ||

ದುರುಬುದ್ಧಿಗಳನೆಲ್ಲ ಬಿಡಿಸೋ |ನಿನ್ನ|
ಕರುಣ ಕವಚ ಎನ್ನ ಹರಣಕ್ಕೆ ತೊಡಿಸೋ ||
ಚರಣ ಸೇವೆ ಎನಗೆ ಕೊಡಿಸೋ 
ಅಭಯಕರ ಪುಷ್ಪವ ಎನ್ನ ಶಿರದಲ್ಲಿ ಮುಡಿಸೋ ||೧||

ದೃಢಭಕ್ತಿ ನಿನ್ನಲ್ಲಿ ಬೇಡಿ |ನಾನು|
ಅಡಿಗೆರಗುವೆನಯ್ಯಾ ಅನುದಿನ ಪಾಡಿ ||
ಕಡೆಗಣ್ಣಲ್ಲೇಕೆನ್ನ ನೋಡಿ ಬಿಡುವೆ 
ಕೊಡು ನಿನ್ನ ಧ್ಯಾನವ ಮನ ಶುಚಿ ಮಾಡಿ ||೨||

ಮೊರೆ ಹೊಕ್ಕವರ ಕಾಯ್ವ ಬಿರುದು |ಎನ್ನ|
ಮರೆಯದೆ ರಕ್ಷಣೆ ಮಾಡಯ್ಯ ಪೊರೆದು ||
ದುರಿತಗಳೆಲ್ಲವ ತರಿದು 
ಸಿರಿ ಪುರಂದರ ವಿಠಲ ಎನ್ನನು ಪೊರೆದು ||೩||

dAsanna mADikO enna svAmi
sAsira nAmada vEMkaTaramaNa ||pa||
 
durubuddhigaLanella biDisO |ninna|
karuNa kavaca enna haraNakke toDisO ||
caraNa sEve enage koDisO 
aBayakara puShpava enna Siradalli muDisO ||1||
 
dRuDhaBakti ninnalli bEDi |nAnu|
aDigeraguvenayyA anudina pADi ||
kaDegaNNallEkenna nODi biDuve 
koDu ninna dhyAnava mana Suci mADi ||2||
 
more hokkavara kAyva birudu |enna|
mareyade rakShaNe mADayya poredu ||
duritagaLellava taridu 
siri puraMdara viThala ennanu poredu ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru