ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಘಟಿಕಾಚಲದಿ ನಿಂತ | ಶ್ರೀ ಪುರಂದರ ವಿಠಲ | Ghatikachaladi Ninta | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಘಟಿಕಾಚಲದಿ ನಿಂತ ಶ್ರೀ ಹನುಮಂತ ||ಪ||

ಘಟಿಕಾಚಲದಿ ನಿಂತ ಪಟು ಹನುಮಂತನ 
ಪಠನೆಯ ಮಾಡಲುತ್ಕಟದಿ ಪೊರೆವೆನೆಂದು ||ಅಪ||

ಚತುರಯುಗದಿ ತಾನು ಮುಖ್ಯಪ್ರಾಣನು
ಚತುರ್ಮುಖನಯ್ಯನ ಚತುರ ಮೂರುತಿಗಳನು
ಚತುರತನದಿ ಭಜಿಸಿ ಚತುರ್ಮುಖನಾಗಿ ಜಗಕೆ 
ಚತುರ್ವಿಧ ಫಲವ ಕೊಡುತ ||೧||

ಸರಸಿಜ ಭವಗೋಸ್ಕರ ಕಲ್ಮಶ ದೂರ
ವರಚಕ್ರ ತೀರ್ಥಸರ ಮೆರೆವಾಚಲದಿ ನಿಂತು 
ನರಹರಿಗೆದುರಾಗಿ ಸ್ಥಿರ ಯೋಗಾಸನದಿ 
ಕರೆದು ವರಗಳ ಕೊಡುತಾ ||೨||

ಶಂಖ ಚಕ್ರವ ಧರಿಸಿ ಭಕ್ತರ ಮನದ
ಪಂಕವ ಪರಿಹರಿಸಿ 
ಪಂಕಜನಾಭ ಶ್ರೀ ಪುರಂದರ ವಿಠಲನ್ನ 
ಬಿಂಕದ ಸೇವಕ ಸಂಕಟ ಕಳೆಯುತ || ೩ ||

GaTikAcaladi niMta SrI hanumaMta ||pa||

GaTikAcaladi niMta paTu hanumaMtana 
paThaneya mADalutkaTadi poreveneMdu ||apa||
 
caturayugadi tAnu muKyaprANanu
caturmuKanayyana catura mUrutigaLanu
caturatanadi Bajisi caturmuKanAgi jagake 
caturvidha Palava koDuta ||1||
 
sarasija BavagOskara kalmaSa dUra
varacakra tIrthasara merevaacaladi niMtu 
naraharigedurAgi sthira yOgAsanadi 
karedu varagaLa koDutA ||2||
 
SaMKa cakrava dharisi Baktara manada
paMkava pariharisi 
paMkajanABa SrI puraMdara viThalanna 
biMkada sEvaka saMkaTa kaLeyuta || 3 ||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru