ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕಂದನಾ ಕಂಡಿರೇನೆ | ಪುರಂದರ ವಿಠಲ | Kandana Kandirene | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಕಂದನಾ ಕಂಡಿರೇನೆ ಗೋಪಿಯ ಕಂದಾ ||ಪ||
ಕಂದನಲ್ಲವೆ ಎನ್ನ ಕುಂದಣದರಗಿಣಿಯು ||ಅಪ||

ಉಂಗುರವನಿಟ್ಟಿದ್ದೆ | ಉಡಿದಾರ ಕಟ್ಟಿದ್ದೆ |
ಬಂಗಾರದ ಟೊಪ್ಪಿಗೆಯ ತಲೆಯ ಮೇಲಿಟ್ಟಿದ್ದೆ ||೧||

ರೊಟ್ಟಿಯ ಸುಟ್ಟಿದ್ದೆ | ತುಪ್ಪವ ಕಾಸಿದ್ದೆ |
ಇಷ್ಟು ಹೊತ್ತು ಹೋಯಿತು ಉಣಲಿಲ್ಲ ||೨||

ಕಾಶಿಗೆ ಹೋಗಿ ನಾ ಪಡೆದೆ | ಪುರಂದರ ವಿಠಲನ  | 
ದಾಸರಿಗೆ ತಕ್ಕ ಮಗುವೇ ನಮ್ಮಮ್ಮ ||೩||

kaMdanA kaMDirEne gOpiya kaMdA ||pa||
kaMdanallave enna kuMdaNadaragiNiyu ||apa||
 
uMguravaniTTidde | uDidAra kaTTidde |
baMgArada Toppigeya taleya mEliTTidde ||1||
 
roTTiya suTTidde | tuppava kAsidde |
iShTu hottu hOyitu uNalilla ||2||
 
kASige hOgi nA paDede | puraMdara viThalana  | 
dAsarige takka maguvE nammamma ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru