ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕಂಡೆ ಕರುಣಾನಿಧಿಯ | ಪುರಂದರ ವಿಠಲ | Kande Karunanidhiya | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಕಂಡೆ ಕರುಣಾನಿಧಿಯ ಗಂಗೆಯ ಮಂಡೆಯೊಳಿಟ್ಟ ದೊರೆಯ ||ಪ||
ರುಂಡ ಮಾಲೆ ಸಿರಿಯ ನೊಸಲೊಳು ಕೆಂಡಗಣ್ಣಿನ ಬಗೆಯ ಹರನ ||ಅಪ||

ಗಜ ಚರ್ಮಾಂಬರನ ಗೌರೀವರ ಜಗದೀಶ್ವರನ |
ತ್ರಿಜಗನ್ಮೋಹನನ ತ್ರಿಲೋಚನ ತ್ರಿಪುರಾಂತಕ ಶಿವನ ಹರನ ||೧||

ಭಸಿತ ಭೂಷಿತ ಹರನ ಭಕ್ತರ ವಶದೊಳಗಿರುತಿಹನ ||
ಪಶುಪತಿಯೆನಿಸುವನ ವಸುಧೇಲಿ ಶಶಿಶೇಖರ ಶಿವನ ಹರನ ||೨||

ಕಪ್ಪುಗೊರಳ ಹರನ ಕಂದರ್ಪ ಪಿತನ ಸಖನ ||
ಮುಪ್ಪುರ ಗೆಲಿದವನ ಮುನಿನುತ ಸರ್ಪಭೂಷಣ ಶಿವನ ಹರನ ||೩||

ಕಾಮಿತ ಫಲವೀವನ ಭಕುತರ ಪ್ರೇಮದಿ ಸಲಹುವನ ||
ರಾಮನಾಮ ಸ್ಮರನಾ ರತಿಪತಿ ಕಾಮನ ಸಂಹರನ ಶಿವನ ||೪||

ಧರೆಗೆ ದಕ್ಷಿಣಕಾಶಿ ಎನಿಸುವ ಪಂಪಾಪುರ ವಾಸಿ ||
ತಾರಕ ಉಪದೇಶಿ ಪುರಂದರ ವಿಠಲ ಭಕ್ತರ ಪೋಷಿ ಹರನ ||೫||

kaMDe karuNAnidhiya gaMgeya maMDeyoLiTTa doreya ||pa||
ruMDa mAle siriya nosaloLu keMDagaNNina bageya harana ||apa||
 
gaja carmAMbarana gaurIvara jagadISvarana |
trijaganmOhanana trilOcana tripurAMtaka Sivana harana ||1||
 
Basita BUShita harana Baktara vaSadoLagirutihana ||
paSupatiyenisuvana vasudhEli SaSiSEKara Sivana harana ||2||
 
kappugoraLa harana kaMdarpa pitana saKana ||
muppura gelidavana muninuta sarpaBUShaNa Sivana harana ||3||
 
kAmita PalavIvana Bakutara prEmadi salahuvana ||
rAmanAma smaranA ratipati kAmana saMharana Sivana ||4||
 
dharege dakShiNakASi enisuva paMpApura vAsi ||
tAraka upadESi puraMdara viThala Baktara pOShi harana ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru