ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಕಂಡೆ ನಾ ಗೋವಿಂದನ | ಪುರಂದರ ವಿಠಲ | Kande Na Govindana | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಕಂಡೆ ನಾ ಗೋವಿಂದನ | 
ಪುಂಡರೀಕಾಕ್ಷ ಪಾಂಡವ ಪಕ್ಷ ಕೃಷ್ಣನ ||ಪ||

ಕೇಶವ ನಾರಾಯಣ ಶ್ರೀ ಕೃಷ್ಣನ |
ವಾಸುದೇವ ಅಚ್ಯುತ ಅನಂತನ ||
ಸಾಸಿರ ನಾಮದ ಶ್ರೀ ಹೃಷಿಕೇಶನ |
ಶೇಷಶಯನ | ನಮ್ಮ ವಸುದೇವ ಸುತನ ||೧||

ಮಾಧವ ಮಧುಸೂದನ ತ್ರಿವಿಕ್ರಮನ |
ಯಾದವ ಮುನಿಕುಲವಂದ್ಯನ ||
ವೇದಾಂತ ವೇದ್ಯನ ಇಂದಿರಾರಮಣನ |
ಆದಿ ಮೂರುತಿ ಪ್ರಹ್ಲಾದ ವರದನ ||೨||

ಪುರುಷೋತ್ತಮ ನರಹರಿ ಶ್ರೀ ಕೃಷ್ಣನ |
ಶರಣಾಗತ ಜನ ರಕ್ಷಕನ ||
ಕರುಣಾಕರ ನಮ್ಮ ಪುರಂದರ ವಿಠಲನ |
ನೆರೆ ನಂಬಿದೆನು ಬೇಲೂರ ಚೆನ್ನಿಗನ ||೩||

kaMDe nA gOviMdana | 
puMDarIkAkSha pAMDava pakSha kRuShNana ||pa||
 
kESava nArAyaNa SrI kRuShNana |
vAsudEva acyuta anaMtana ||
sAsira nAmada SrI hRuShikESana |
SEShaSayana | namma vasudEva sutana ||1||
 
mAdhava madhusUdana trivikramana |
yAdava munikulavaMdyana ||
vEdAMta vEdyana iMdirAramaNana |
Adi mUruti prahlAda varadana ||2||
 
puruShOttama narahari SrI kRuShNana |
SaraNAgata jana rakShakana ||
karuNAkara namma puraMdara viThalana |
nere naMbidenu bElUra cennigana ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru