ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಲಕ್ಷ್ಮೀಕಾಂತ ಬಾರೋ | ಪುರಂದರ ವಿಠಲ | Lakshmikantha Baaro | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಲಕ್ಷ್ಮೀಕಾಂತ ಬಾರೋ, ಶುಭಲಕ್ಷಣವಂತ ಬಾರೋ
ಪಕ್ಷಿವಾಹನ ಏರಿದವನೆ ವಾಮನಮೂರುತಿ ಬಾರೋ ||ಪ||

ಆದಿಮೂಲ ವಿಗ್ರಹ ವಿನೋದಿ ನೀನೆ ಬಾರೋ ||
ಸಾಧುಸಜ್ಜನ ಸತ್ಯಯೋಗಿ ದಾನಿ ನೀನೆ ಬಾರೋ ||೧||

ಗಾಡಿಕಾರ ಕೃಷ್ಣ ನಿನ್ನ ಬೇಡಿಕೊಂಬೆ ಬಾರೋ
ರೂಡ ಮಾತನಾಡಿ ಸರ್ವ ರೂಢಿಗೊಡೆಯ ಬಾರೋ ||೨||

ನಿನ್ನ ಪಾದಂಗಳ ನಾನು ಬಣ್ಣಿಸಿ ಕರೆವೆ ಬಾರೋ ||
ಪನ್ನಗ ಶಯನ ಪುರಂದರ ವಿಠಲ ನೀನೇ ಬಾರೋ ||೩||


lakShmIkAMta bArO, SuBalakShaNavaMta bArO
pakShivAhana Eridavane vAmanamUruti bArO ||pa||
 
AdimUla vigraha vinOdi nIne bArO ||
sAdhusajjana satyayOgi dAni nIne bArO ||1||
 
gADikAra kRuShNa ninna bEDikoMbe bArO
rUDa mAtanADi sarva rUDhigoDeya bArO ||2||

ninna pAdaMgaLa nAnu baNNisi kareve bArO ||
pannaga Sayana puraMdara viThala nInE bArO ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru