ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮದ್ದು ಮಾಡಲಾರೆಯ | ಶ್ರೀ ಪುರಂದರ ವಿಠಲ | Maddu Madalareya | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಮದ್ದು ಮಾಡಲಾರೆಯ ಎನ್ನಮ್ಮ ನೀ ಮುದ್ದು ರಮಾದೇವಿ ||ಪ||

ಮುದ್ದು ಬಾಲಕೃಷ್ಣನಲ್ಲಿ ಎನ್ನ ಮನಸು ನಿಲ್ಲೋ ಹಾಂಗೆ ||ಅಪ||

ವಚನಂಗಳಲ್ಲಿ ವಾಸುದೇವನ ಚರಿತೆಯು 
ರಚನೆ ಮಾಡುವರಲ್ಲಿ ಭಕುತಿ ನಿಲ್ಲಿಸೋ ಹಾಂಗೆ ||೧||

ಸಂತೆನೆರಹಿದ ಸತಿಸುತರು ತನ್ನವರೆಂಬ 
ಭ್ರಾಂತಿಯ ಬಿಟ್ಟು ನಿಶ್ಚಿಂತನಾಗುವ ಹಾಂಗೆ ||೨||

ಎನ್ನೊಡೆಯ ಶ್ರೀ ಪುರಂದರ ವಿಠಲನ 
ಸನ್ಮತಿಯಿಂದ ನಾ ಪಾಡುವ ಹಾಂಗೆ ||೩||


maddu mADalAreya ennamma nI muddu ramAdEvi ||pa||

muddu bAlakRuShNanalli enna manasu nillO hAMge ||apa||

vacanaMgaLalli vAsudEvana cariteyu 
racane mADuvaralli Bakuti nillisO hAMge ||1||

saMtenerahida satisutaru tannavareMba 
BrAMtiya biTTu niSciMtanAguva hAMge ||2||

ennoDeya SrI puraMdara viThalana 
sanmatiyiMda nA pADuva hAMge ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru