ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಪಿಳ್ಳಂಗೋವಿಯ ಚೆಲ್ವ ಕೃಷ್ಣನ | ಪುರಂದರ ವಿಠಲ | Pillangoviya Chelva | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti:   Sri Purandara Dasaru (Purandara vittala)


ಪಿಳ್ಳಂಗೋವಿಯ ಚೆಲ್ವ ಕೃಷ್ಣನ | 
ಎಲ್ಲಿ ನೋಡಿದಿರಿ | ರಂಗನ ಎಲ್ಲಿ ನೋಡಿದಿರಿ ||ಪ||

ಎಲ್ಲಿ ನೋಡಿದರಲ್ಲಿ ತಾನಿಲ್ಲದಿಲ್ಲವೆಂದು ಬಲ್ಲ ಜಾಣರೆ ||ಅಪ||

ನಂದಗೋಪನ ಮಂದಿರಂಗಳ ಸಂದುಗೊಂದಿನಲಿ 
ಚಂದ ಚಂದದ ಗೋಪ ಬಾಲರ ವೃಂದ ವೃಂದದಲಿ | 
ಸುಂದರಾಂಗದ ಸುಂದರೀಯರ ಹಿಂದು ಮುಂದಿನಲಿ ||
ಅಂದದಾಕಳ ಕಂದ ಕರುಗಳ ಮಂದೆ ಮಂದೆಯಲಿ ||೧||

ಶ್ರೀ ಗುರೂಕ್ತ ಸದಾ ಮಂಗಳ ಯೋಗ ಯೋಗದಲಿ 
ಆಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ |
ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ | 
ಭಾಗವತರು ಬಾಗಿ ಪಾಡುವ ರಾಗ ರಾಗದಲಿ ||೨||

ಈ ಚರಾಚರದೊಳಗೆ ಅಜಾಂಡದ ಆಚೆ ಈಚೆಯಲಿ |
ಖೇಚರೇಂದ್ರನ ಸುತನ ರಥದ ಅಚ್ಚ ಪೀಠದಲಿ |
ನಾಚದೆ ಮಾಧವ ಕೇಶವ ಎಂಬ ವಾಚಕಂಗಳಲಿ |
ವೀಚು ಕೊಂಡದ ಪುರಂದರ ವಿಠಲನ ಲೋಚನಾಗ್ರದಲಿ ||೩||

piLLaMgOviya celva kRuShNana | 
elli nODidiri | raMgana elli nODidiri ||pa||
 
elli nODidaralli tAnilladillaveMdu balla jANare ||apa||
 
naMdagOpana maMdiraMgaLa saMdugoMdinali 
caMda caMdada gOpa bAlara vRuMda vRuMdadali | 
suMdarAMgada suMdarIyara hiMdu muMdinali ||
aMdadAkaLa kaMda karugaLa maMde maMdeyali ||1||
 
SrI gurUkta sadA maMgaLa yOga yOgadali 
AgamArthadoLage mADuva yAga yAgadali |
SrIge BAgyanAgi vartipa BOga BOgadali | 
BAgavataru bAgi pADuva rAga rAgadali ||2||
 
I carAcaradoLage ajAMDada Ace Iceyali |
KEcarEMdrana sutana rathada acca pIThadali |
nAcade mAdhava kESava eMba vAcakaMgaLali |
vIcu koMDada puraMdara viThalana lOcanAgradali ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru