ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ದಾಸ ದಾಸರ ಮನೆಯ | ಶ್ರೀ ಕನಕದಾಸರು | Dasa Dasara Maneya | Sri Kanaka Dasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanakadasaru


ದಾಸ ದಾಸರ ಮನೆಯ ದಾಸಾನುದಾಸ ನಾನು ||ಪ||

ಶ್ರೀಶ ಶ್ರೀರಂಗ ನಿಮ್ಮ ಮನೆಯ ದಾಸ ||ಅಪ||

ಶಂಕುದಾಸರ ಮನೆಯ ಮಂಕು ದಾಸ ನಾನಯ್ಯ 
ಮಂಕುದಾಸನು ನಾನು ಮರುಳು ದಾಸ
ಸಂಕೀರ್ತನೆಯ ಮಾಡಿ ನೆನೆವ ಭಕ್ತರ ಮನೆಯ
ಬಿಂಕದಿ ಬಾಗಿಲ ಕಾಯ್ವ ಬಡ ದಾಸ ನಾನಯ್ಯ ||೧||

ಕಾಳಿದಾಸರ ಮನೆಯ ಕೀಳು ದಾಸ ನಾನಯ್ಯ
ಆಳು ದಾಸನು ನಾನು ಮೂಳದಾಸ  
ಫಾಲಾಕ್ಷಸಖ ನಿನ್ನ ಭಜಿಪ ಭಕ್ತರ ಮನೆಯ
ಆಳಿನಾಳಿನ ಮನೆಯ ಅಡಿದಾಸ ನಾನಯ್ಯ ||೨||

ಹಲವು ದಾಸರ ಮನೆಯ ಹೊಲೆದಾಸ ನಾನಯ್ಯ
ಕುಲವಿಲ್ಲದ ದಾಸ ಕುರುಬ ದಾಸ 
ಛಲದಿ ನಿನ್ನ ಭಜಿಸುವರ ಮನೆಯ ಮಾದಿಗ ದಾಸ
ಸಲೆ ಮುಕ್ತಿ ಪಾಲಿಸೆನ್ನ ಒಡೆಯ ಕೇಶವ ನಿನ್ನ ||೩||

dAsa dAsara maneya dAsAnudAsa nAnu ||pa||

SrISa SrIraMga nimma maneya dAsa ||apa||

SaMkudAsara maneya maMku dAsa nAnayya 
maMkudAsanu nAnu maruLu dAsa
saMkIrtaneya mADi neneva Baktara maneya
biMkadi bAgila kAyva baDa dAsa nAnayya ||1||

kALidAsara maneya kILu dAsa nAnayya
ALu dAsanu nAnu mULadAsa
PAlAkShasaKa ninna Bajipa Baktara maneya
ALinALina maneya aDidAsa nAnayya ||2||

halavu dAsara maneya holedAsa nAnayya
kulavillada dAsa kuruba dAsa 
Caladi ninna Bajisuvara maneya mAdiga dAsa
sale mukti pAlisenna oDeya kESava ninna ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru