ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಗುರು ಪುರಂದರ ದಾಸರೇ | ಶ್ರೀ ವಿಜಯ ದಾಸರ ಕೃತಿ | Guru Purandara Dasare | Vijaya Dasara kruti


ಸಾಹಿತ್ಯ : ಶ್ರೀ ವಿಜಯ ದಾಸರು
Kruti: Sri Vijaya Dasaru


ಗುರು ಪುರಂದರ ದಾಸರೇ ನಿಮ್ಮ ಚರಣ ಕಮಲವ ನಂಬಿದೆ ||ಪ||

ಗರುವ ರಹಿತರ ಮಾಡಿ ಎಮ್ಮನು ಪೊರೆವ ಭಾರವು ನಿಮ್ಮದೇ ||ಅಪ||

ಒಂದು ಅರಿಯದ ಮಂದಮತಿ ನಾ ಇಂದು ನಿಮ್ಮನು ನಂಬಿದೆ |
ಇಂದಿರೇಶನ ಪಾದ ತೋರಿಸೊ ತಂದೆ ಮಾಡೆಲೊ ಸತ್ಕೃಪೆ ||೧||

ಪುರಂದರ ಘಡದೊಳಗೆ ನಿಂದು ನಿರುತ ದ್ರವ್ಯವ ಗಳಿಸಿದೆ |
ಪರಮಪುರುಷ ವಿಪ್ರನಂದದಿ ಕರವ ನೀಡಿ ಯಾಚಿಸೆ ||೨||

ಪರಮ ನಿರ್ಗುಣ ಮನವನರಿತು ಹರಿಗೆ ಸೂರೆಯ ನೀಡುತ |
ಅರಿತು ಮನದೊಳು ಹರಿದು ಭವಗಳ ತರುಣಿ ಸಹಿತಾ ಹೊರಟನೆ ||೩||

ಮಾರಜನಕನ ಸನ್ನಿಧಾನದಿ ಸಾರಗಾನವ ಮಾಡುವ |
ನಾರದರು ಈ ರೂಪದಿಂದಲಿ ಚಾರು ದರುಶನ ತೋರಿದೆ ||೪||

ಅಜಭವಾದಿಗಳರಸನಾದ ವಿಜಯ ವಿಠಲನ ಧ್ಯಾನಿಪ |
ನಿಜ ಸುಜ್ಞಾನವ ಕೊಡಿಸಬೇಕೆಂದು ಭಜಿಪೆನು ಕೇಳ್ ಗುರುವರ ||೫||

guru puraMdara dAsarE nimma caraNa kamalava naMbide ||pa||

garuva rahitara mADi emmanu poreva BAravu nimmadE ||apa||
 
oMdu ariyada maMdamati nA iMdu nimmanu naMbide |
iMdirESana pAda tOriso taMde mADelo satkRupe ||1||
 
puraMdara GaDadoLage niMdu niruta dravyava gaLiside |
paramapuruSha vipranaMdadi karava nIDi yAcise ||2||
 
parama nirguNa manavanaritu harige sUreya nIDuta |
aritu manadoLu haridu BavagaLa taruNi sahitA horaTane ||3||
 
mArajanakana sannidhAnadi sAragAnava mADuva |
nAradaru I rUpadiMdali cAru daruSana tOride ||4||
 
ajaBavAdigaLarasanAda vijaya viThalana dhyAnipa |
nija suj~jAnava koDisabEkeMdu Bajipenu kEL guruvara ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru