ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಾಚಿಕೆ ಪಡಬೇಡ ಮನದಲಿ | ಪುರಂದರ ವಿಠಲ | Nachike padabeda | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ನಾಚಿಕೆ ಪಡಬೇಡ ಮನದಲಿ ಯೋಚಿಸಿ ಕೆಡಬೇಡ ||ಪ||
ನೀಚವೇನೋ ನಮ್ಮಚ್ಯುತನೋಲಗ ಮೆಚ್ಚಿಕೊಟ್ಟಿದೆ ನಿನಗ್ಹೆಚ್ಚಿನ ಪದವಿಯ ||ಅಪ||

ಹರಿ ಹರಿ ಎಂದೊದರೋ ಹತ್ತಿದ ಪಾಪಗಳಿಗೆ ಬೆದರೋ ||
ನೀರಜಾಕ್ಷ ನಿರ್ಜರ ಪತಿ ಹರಿ ಎಂದು |
ಚೀರಿ ಹಾರಿ ಬೋರಿಡುತಲಿ ಕುಣಿಯೋ ||೧||

ಯಾರ ಗೊಡವೆಯೇನೋ ನರಕದ ದಾರಿ ತಪ್ಪಿಪರೇನೋ |
ಸಾರಿ ಸಾರಿಗೆ ಸರ್ವೇಶನ ನಾಮವ |
ಬೀರಿ ಬೀರಿ ಕೈ ಮುಗಿದು ಕೊಂಡಾಡೋ ||೨||

ಭಕ್ತ ಜನರ ಕೂಡೋ ಭವ ಭಯ ಬತ್ತಿ ಪೋಪುದು ನೋಡೋ |
ಮುಕ್ತಿದಾಯಕ ನಮ್ಮ ಪುರಂದರ ವಿಠಲನ |
ಭಕ್ತಿಯಿಂದ ನೀ ಪಾಡುತ ಕುಣಿಯೋ ||೩||

nAcike paDabEDa manadali yOcisi keDabEDa ||pa||
nIcavEnO nammacyutanOlaga meccikoTTide ninag~heccina padaviya ||apa||
 
hari hari eMdodarO hattida pApagaLige bedarO ||
nIrajAkSha nirjara pati hari eMdu |
cIri hAri bOriDutali kuNiyO ||1||
 
yAra goDaveyEnO narakada dAri tappiparEnO |
sAri sArige sarvESana nAmava |
bIri bIri kai mugidu koMDADO ||2||

Bakta janara kUDO Bava Baya batti pOpudu nODO |
muktidAyaka namma puraMdara viThalana |
BaktiyiMda nI pADuta kuNiyO ||3||


Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru