ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ರಂಗ ಬಾರೋ ಪಾಂಡುರಂಗ ಬಾರೋ | ಪುರಂದರ ವಿಠಲ | Ranga Baaro | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ರಂಗ ಬಾರೋ ಪಾಂಡುರಂಗ ಬಾರೋ| 
ಶ್ರೀರಂಗ ಬಾರೋ ನರಸಿಂಗ ಬಾರೋ |ಪ|

ಕಂದ ಬಾರೋ ಎನ್ನ ತಂದೆ ಬಾರೋ| 
ಇಂದಿರಾ ರಮಣ ಮುಕುಂದ ಬಾರೋ |೧|

ಅಪ್ಪ ಬಾರೋ ತಿಮ್ಮಪ್ಪ ಬಾರೋ| 
ಕಂದರ್ಪನಯ್ಯನೇ ಕಂಚಿ ವರದ ಬಾರೋ |೨|

ಅಣ್ಣ ಬಾರೋ ಎನ್ನ ಚಿಣ್ಣ ಬಾರೋ| 
ಪುಣ್ಯಮೂರ್ತಿ ಮಹಿಷ ಪುರಿ ಚೆನ್ನ ಬಾರೋ|೩|

ವಿಷ್ಣು ಬಾರೋ ಉಡುಪಿ ಕೃಷ್ಣ ಬಾರೋ| ಎ-
ನ್ನಿಷ್ಟ ಮೂರ್ತಿ ಪುರಂದರ ವಿಠಲ ಬಾರೋ |೪|

raMga bArO pAMDuraMga bArO| 
SrIraMga bArO narasiMga bArO |pa|
 
kaMda bArO enna taMde bArO| 
iMdirA ramaNa mukuMda bArO |1|
 
appa bArO timmappa bArO| 
kaMdarpanayyanE kaMci varada bArO |2|
 
aNNa bArO enna ciNNa bArO| 
puNyamUrti mahiSha puri cenna bArO|3|
 
viShNu bArO uDupi kRuShNa bArO| e-
nniShTa mUrti puraMdara viThala bArO |4|

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru