ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಸುಂದರ ಮೂರುತಿ ಮುಖ್ಯಪ್ರಾಣ | ಪುರಂದರ ದಾಸರು | Sundara Muruti | Sri Purandara Dasaru


ಸಾಹಿತ್ಯ: ಶ್ರೀ ಪುರಂದರ ದಾಸರು 
Kruti: Sri Purandara Dasaru

 
ಸುಂದರ ಮೂರುತಿ ಮುಖ್ಯಪ್ರಾಣ ಬಂದ ಮನೆಗೆ ||ಪ||

ಪ್ರಾಣ ಬಂದ ಮನೆಗೆ ಶ್ರೀ ರಾಮನಾಮ ಧ್ವನಿಗೆ ||ಅಪ||

ಕಣಕಾಲಂದುಗೆ ಗೆಜ್ಜೆ ಝಣ ಝಣರೆನುತ | 
ಝಣಕು ಝಣಕು ಎಂದು ಕುಣಿ ಕುಣಿದಾಡುತ ||೧||

ತುಂಬುರು ನಾರದರು ವೀಣೆ ಬಾರಿಸುತ || 
ವೀಣೆ ಬಾರಿಸುತ ಶ್ರೀ ರಾಮ ನಾಮ ಪಾಡುತ ||೨||

ಪುರಂದರ ವಿಠಲನ ನೆನೆದು ಪಾಡುತಲಿ || 
ನೆನೆದು ಪಾಡುತಲಿ ಆಲಿಂಗನ ಮಾಡುತಲಿ ||೩||

suMdara mUruti muKyapraaNa baMda manege ||pa||

praaNa baMda manege shrI raamanaama dhvanige ||apa||

kaNakaalaMduge gejje JaNa JaNarenuta | 
JaNaku JaNaku eMdu kuNi kuNidaaDuta ||1||

tuMburu naaradaru vINe baarisuta || 
vINe baarisuta shrI raama naama paaDuta ||2||

puraMdara viThalana nenedu paaDutali || 
nenedu paaDutali AliMgana maaDutali ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru