ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ವೀರ ಹನುಮ ಬಹು | ಶ್ರೀ ಪುರಂದರ ವಿಠಲ | Veera Hanuma Bahu | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು Kruti: Sri Purandara Dasaru



ವೀರ ಹನುಮ ಬಹು ಪರಾಕ್ರಮ ||ಪ|| ಸುಜ್ಞಾನವಿತ್ತು ಪಾಲಿಸೆನ್ನ ಜೀವರೋತ್ತಮ ||ಅಪ|| ರಾಮದೂತನೆನಿಸಿಕೊಂಡೆ ನೀ | ರಾಕ್ಷಸರ ವನವನೆಲ್ಲ ಕಿತ್ತು ಬಂದೆ ನೀ || ಜಾನಕಿಗೆ ಮುದ್ರೆಯಿತ್ತು ಜಗತಿಗೆಲ್ಲ ಹರುಷವಿತ್ತು ಚೂಡಾಮಣಿಯ ರಾಮಗಿತ್ತು ಲೋಕಕೆ ಮುದ್ದೆನಿಸಿ ಮೆರೆವ ||೧|| ಗೋಪಿಸುತನ ಪಾದ ಪೂಜಿಸಿ | ಗದೆಯ ಧರಿಸಿ ಬಕಾಸುರನ ಸಂಹರಿಸಿದೆ || ದ್ರೌಪದಿಯ ಮೊರೆಯ ಕೇಳಿ ಮತ್ತೆ ಕೀಚಕನ್ನ ಕೊಂದು ಭೀಮನೆಂಬ ನಾಮ ಧರಿಸಿ ಸಂಗ್ರಾಮ ಧೀರನಾಗಿ ಜಗದಿ ||೨|| ಮಧ್ಯಗೇಹನಲ್ಲಿ ಜನಿಸಿ ನೀ | ಬಾಲ್ಯದಲ್ಲಿ ಮಸ್ಕರೀಯ ರೂಪಗೊಂಡೆ ನೀ || ಸತ್ಯವತಿಯ ಸುತನ ಭಜಿಸಿ ಸಮ್ಮುಖದಿ ಭಾಷ್ಯ ಮಾಡಿ ಸಜ್ಜನರ ಪೊರೆವ ಮುದ್ದು ಪುರಂದರ ವಿಠಲ ದಾಸ ||೩|| vIra hanuma bahu parAkrama ||pa|| suj~jAnavittu pAlisenna jIvarOttama ||apa|| rAmadUtanenisikoMDe nI | rAkShasara vanavanella kittu baMde nI || jAnakige mudreyittu jagatigella haruShavittu cUDAmaNiya rAmagittu lOkake muddenisi mereva ||1|| gOpisutana pAda pUjisi | gadeya dharisi bakAsurana saMhariside || draupadiya moreya kELi matte kIcakanna koMdu BImaneMba nAma dharisi saMgrAma dhIranAgi jagadi ||2|| madhyagEhanalli janisi nI | bAlyadalli maskarIya rUpagoMDe nI || satyavatiya sutana Bajisi sammuKadi BAShya mADi sajjanara poreva muddu puraMdara viThala dAsa ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru