ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ವೇಂಕಟರಮಣನೆ ಬಾರೋ | ಪುರಂದರ ವಿಠಲ | Venkataramanane Baaro | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ವೇಂಕಟರಮಣನೆ ಬಾರೋ ಶೇಷಾಚಲವಾಸನೆ ಬಾರೋ |ಪ|

ಪಂಕಜನಾಭ ಪರಮಪವಿತ್ರ ಶಂಕರ ಮಿತ್ರನೆ ಬಾರೋ |ಅಪ|

ಮುದ್ದು ಮುಖದ ಮಗುವೆ ನಿನಗೆ ಮುದ್ದು ಕೊಡುವೆನು ಬಾರೋ|
ನಿರ್ದಯವೇಕೋ ನಿನ್ನೊಳಗೆ ನಾನು ಪೊಂದಿದ್ದೇನು ಬಾರೋ |೧|

ಮಂದರಗಿರಿಯನೆತ್ತಿದಾನಂದ ಮೂರುತಿಯೇ ಬಾರೋ|
ನಂದನ ಕಂದ ಮುಕುಂದ ಗೋವಿಂದ ಇಂದಿರೆಯರಸನೆ ಬಾರೋ |೨|

ಕಾಮನಯ್ಯ ಕರುಣಾಳೋ ಶ್ಯಾಮಲ ವರ್ಣನೆ ಬಾರೋ|
ಕೋಮಲಾಂಗ ಶ್ರೀ ಪುರಂದರ ವಿಠಲನೆ ಸ್ವಾಮಿರಾಯನೆ ಬಾರೋ |೩|

vEMkaTaramaNane bArO SEShAcalavAsane bArO |pa|

paMkajanABa paramapavitra SaMkara mitrane bArO |apa|
 
muddu muKada maguve ninage muddu koDuvenu bArO|
nirdayavEkO ninnoLage nAnu poMdiddEnu bArO |1|
 
maMdaragiriyanettidAnaMda mUrutiyE bArO|
naMdana kaMda mukuMda gOviMda iMdireyarasane bArO |2|
 
kAmanayya karuNALO SyAmala varNane bArO|
kOmalAMga SrI puraMdara viThalane svAmirAyane bArO |3|

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru