ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಅನುಗಾಲವೂ ಚಿಂತೆ | ಪುರಂದರ ವಿಠಲ | Anugalavu Chinte | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಅನುಗಾಲವೂ ಚಿಂತೆ ಜೀವಕ್ಕೆ ಮನವು |
ಶ್ರೀ ರಂಗನೊಳು ಮೆಚ್ಚುವ ತನಕ ||ಪ||

ಸತಿಯಿದ್ದರೂ ಚಿಂತೆ ಸತಿಯಿಲ್ಲದ ಚಿಂತೆ |
ಮತಿಹೀನ ಸತಿಯೂ ಆದರೂ ಚಿಂತೆ ||
ಪೃಥ್ವಿಯೊಳಗೆ ಸತಿ ಕಡು ಚೆಲ್ವೆ ಯಾದರೇ |
ಮಿತಿ ಮೇರೆಯಿಲ್ಲದ ಮೋಹದ ಚಿಂತೆ ||೧||

ಮಕ್ಕಳಿಲ್ಲದ  ಚಿಂತೆ ಮಕ್ಕಳಾದರೂ ಚಿಂತೆ |
ಒಕ್ಕಾಳು ಹೊನ್ನು ಕೊಡುವ ಚಿಂತೆ |
ಅಕ್ಕರೆಯಿಂದಲಿ ತುರುಗಳ ಕಾಯ್ದರು |
ಕಕ್ಕುಲತೆಯು ಬಿಟ್ಟು ಹೋಗದ ಚಿಂತೆ ||೨||

ಬಡವನಾದರೂ ಚಿಂತೆ ಬಲ್ಲಿದನಾದರೂ ಚಿಂತೆ
ಹಿಡಿ ಹೊನ್ನು ಕೈಯೊಳಾದರೂ ಚಿಂತೆ
ಪೊಡವಿಯೊಳಗೆ ನಮ್ಮ ಪುರಂದರ ವಿಠಲನ
ಬಿಡದೆ ಧ್ಯಾನಿಸು ಚಿಂತೆ ನಿಶ್ಚಿಂತೆ ||೩||

anugAlavU ciMte jIvakke manavu |
SrI raMganoLu meccuva tanaka ||pa||
 
satiyiddarU ciMte satiyillada ciMte |
matihIna satiyU AdarU ciMte ||
pRuthviyoLage sati kaDu celve yAdarE |
miti mEreyillada mOhada ciMte ||1||
 
makkaLillada  ciMte makkaLaadarU ciMte |
okkALu honnu koDuva ciMte |
akkareyiMdali turugaLa kAydaru |
kakkulateyu biTTu hOgada ciMte ||2||
 
baDavanAdarU ciMte ballidanaadarU ciMte
hiDi honnu kaiyoLaadarU ciMte
poDaviyoLage namma puraMdara viThalana
biDade dhyAnisu ciMte niSciMte ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru