ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಭಾರತಿ ದೇವಿಯ ನೆನೆ ನೆನೆ | ಶ್ರೀ ಪುರಂದರ ದಾಸರು | Bharati Deviya Nene Nene |Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಭಾರತಿ ದೇವಿಯ ನೆನೆ ನೆನೆ |
ನಿರುತ ಭಕುತಿಗಿದು ಮನೆ ಮನೆ ||ಪ||

ಮಾರುತನರ್ಧಾಂಗಿ ಸುಚರಿತ್ರ ಕೋಮಲಾಂಗಿ 
ಸಾರಸಾಕ್ಷಿ ಕೃಪಾಂಗಿ ಅಪಾಂಗಿ ||೧||

ಕಿಂಕಿಣಿ ಕಿಣಿ ಪಾದ ಪಂಕಜ ನೂಪುರ |
ಕಂಕಣ ಕುಂಡಲ ಅಲಂಕೃತ ದೇಹ ||೨||

ಶಂಕರ ಸುರವರ ವಂದಿತ ಚರಣೆ |
ಕಿಂಕರಿ ಪುರಂದರ ವಿಠಲನ ಕರುಣೆ ||೩||

BArati dEviya nene nene |
niruta Bakutigidu mane mane ||pa||
 
mArutanardhAMgi sucaritra kOmalAMgi 
sArasAkShi kRupAMgi apAMgi ||1||
 
kiMkiNi kiNi pAda paMkaja nUpura |
kaMkaNa kuMDala alaMkRuta dEha ||2||
 
SaMkara suravara vaMdita caraNe |
kiMkari puraMdara viThalana karuNe ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru