ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಮೂಷಿಕ ವಾಹನ ದೋಷ ವಿನಾಶನ | ಶ್ರೀ ಗುರುಜಗನ್ನಾಥ ದಾಸರು | Mooshika Vahana | Sri Guru Jagannatha Dasaru


ಸಾಹಿತ್ಯ : ಶ್ರೀ ಗುರುಜಗನ್ನಾಥ ದಾಸರು 
Kruti:Sri Guru Jagannatha Dasaru


ಮೂಷಿಕ ವಾಹನ ದೋಷ ವಿನಾಶನ 
ದೋಷವ ನೋಡದೆ ಪೋಷಿಸು ಎನ್ನ ||ಪ||

ಶೇಷಶಯನನ ವಿಶೇಷ ಜ್ಞಾನವನಿತ್ತು | 
ಈಶಣತ್ರಯ ಭವ ಸೋಸವಗೈಸೋ ದೇವಾ ||೧||

ನವ ವಿಧ ಭಕುತಿಯು ಸವಣತ್ರಿ ಪೂಜೆಯು | 
ನವ ನವ ಪಾಲಿಸೋ ಭವಹರ ಪುತ್ರನೇ ||೨||

ಪಾತಕವನ ಧೂಮಕೇತನೆ ಗುರು ಜಗನ್ನಾಥ 
ವಿಠಲ ಸಂಪ್ರೀತಿ ಪಾತ್ರನು ನೀನೇ ||೩||

mUShika vaahana dOSha vinaashana 
dOShava nODade pOShisu enna ||pa||

shEShashayanana vishESha j~jaanavanittu | 
IshaNatraya bhava sOsavagaisO dEvaa ||1||

nava vidha bhakutiyu savaNatri pUjeyu | 
nava nava paalisO bhavahara putranE ||2||

paatakavana dhUmakEtane guru jagannaatha 
viThala saMprIti paatranu nInE ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru