ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ನಮ್ಮಮ್ಮ ಶಾರದೆ | ಶ್ರೀ ಕನಕದಾಸರು | Nammamma Sharade | Sri Kanaka Dasaru


ಸಾಹಿತ್ಯ : ಶ್ರೀ ಕನಕದಾಸರು
Kruti: Sri Kanakadasaru


ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ ||ಪ||

ಕಮ್ಮಗೋಲನ ವೈರಿ ಸುತನಾದ ಸೊಂಡಿಲ ಹೆಮ್ಮೈಯ ಗಣನಾಥನೆ ||ಅಪ||

ಮೋರೆ ಕಪ್ಪಿನ ಭಾವ ಮೊರದಗಲದ ಕಿವಿ | ಕೋರೆದಾಡೆಯನ್ಯಾರಮ್ಮ ||
ಮೂರು ಕಣ್ಣನ ಸುತ ಮುರಿದಿಟ್ಟ ಚಂದ್ರನ | ಧೀರ ತಾ ಗಣನಾಥನೆ ಅಮ್ಮಯ್ಯ ||೧||

ಉಟ್ಟ ದಟ್ಟಿಯು ಬಿಗಿದುಟ್ಟ ಚಲ್ಲಣದ | ದಿಟ್ಟ ತಾನಿವನ್ಯಾರಮ್ಮ ||
ಪಟ್ಟದ ರಾಣಿ ಪಾರ್ವತಿಯ ಕುಮಾರನು | ಹೊಟ್ಟೆಯ ಗಣನಾಥನೆ ಅಮ್ಮಯ್ಯ ||೨||

ರಾಶಿ ವಿದ್ಯೆಯ ಬಲ್ಲ ರಮಣಿ ಹಂಬಲನೊಲ್ಲ | ಭಾಷಿಗನಿವನ್ಯಾರಮ್ಮ ||
ಲೇಸಾಗಿ ಜನರ ಸಲಹುವ | ಕಾಗಿನೆಲೆಯಾದಿ ಕೇಶವನ ದಾಸ ಕಣೆ ಅಮ್ಮಯ್ಯ ||೩||

nammamma SArade umA mahESvari nimmoLagihanyAramma ||pa||

kammagOlana vairi sutanAda soMDila hemmaiya gaNanAthane ||apa||
 
mOre kappina BAva moradagalada kivi | kOredADeyanyAramma ||
mUru kaNNana suta muridiTTa caMdrana | dhIra tA gaNanAthane ammayya ||1||
 
uTTa daTTiyu bigiduTTa callaNada | diTTa tAnivanyAramma ||
paTTada rANi pArvatiya kumAranu | hoTTeya gaNanAthane ammayya ||2||
 
rASi vidyeya balla ramaNi haMbalanolla | BAShiganivanyAramma ||
lEsAgi janara salahuva | kAgineleyAdi kESavana dAsa kaNe ammayya ||3||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru