ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ರೊಕ್ಕ ಎರಡಕ್ಕು ದುಃಖ ಕಾಣಕ್ಕ | ಶ್ರೀ ಪುರಂದರದಾಸರು | Rokka Eradakku | Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ರೊಕ್ಕ ಎರಡಕ್ಕು ದುಃಖ ಕಾಣಕ್ಕ ||ಪ||

ಮಕ್ಕಳ ಮರಿಗಳ ಮಾಡೋದು ರೊಕ್ಕ | ಸಕ್ಕರೆ ತುಪ್ಪವ ತಿನಿಸೋದು ರೊಕ್ಕ |
ಕಕ್ಕುಲಾತಿಯನ್ನು ಬಿಡಿಸೋದು ರೊಕ್ಕ | ಘಕ್ಕನೆ ಹೋದರೆ ಘಾತ ಕಾಣಕ್ಕ ||೧||

ನೆಂಟರ ಇಷ್ಟರ ಮರೆಸೋದು ರೊಕ್ಕ | ಕಂಟಕಗಳ ಪರಿಹರಿಸೋದು ರೊಕ್ಕ |
ಗಂಟು ಕಟ್ಟಲಿಕ್ಕೆ ಕಲಿಸೋದು ರೊಕ್ಕ | ತುಂಟತನಗಳನ್ನು ಬಲಿಸೋದು ರೊಕ್ಕ ||೨||

ಇಲ್ಲದ ಗುಣಗಳ ತರಿಸೋದು ರೊಕ್ಕ | ಸಲ್ಲದ ನಾಣ್ಯವ ನಡೆಸೋದು ರೊಕ್ಕ |
ಬೆಲ್ಲಕ್ಕಿಂತಲೂ ಬಹು ಸವಿಯಾದ ರೊಕ್ಕ | ಇಲ್ಲದಿರಲು ಬಹು ದುಃಖ ಕಾಣಕ್ಕ ||೩||

ಉಂಟಾದ ಗುಣಗಳ ಮರೆಸೋದು ರೊಕ್ಕ | ಭಂಟರನೆಲ್ಲರ ಬರಿಸೋದು ರೊಕ್ಕ |
ಕಂಠಿ ಸರಿಗೆಯನ್ನು ಗಳಿಸೋದು ರೊಕ್ಕ | ಒಂಟೆ ಕುದುರೆ ಆನೆ ತರಿಸೋದು ರೊಕ್ಕ ||೪||

ವಿದ್ಯದ ಮನುಜರ ಕರೆಸೋದು ರೊಕ್ಕ | ಹೊದ್ದಿದ್ದ ಜನರನ್ನು ಬಿಡಿಸೋದು ರೊಕ್ಕ ||
ಮುದ್ದು ಪುರಂದರ ವಿಠಲನ ಮರೆಸುವ | ಬಿದ್ಹೋಗೋ ರೊಕ್ಕವ ಸುಡು ನೀನಕ್ಕ ||೫||

rokka eraDakku duHKa kANakka ||pa||
 
makkaLa marigaLa mADOdu rokka | sakkare tuppava tinisOdu rokka |
kakkulAtiyannu biDisOdu rokka | Gakkane hOdare GAta kANakka ||1||
 
neMTara iShTara maresOdu rokka | kaMTakagaLa pariharisOdu rokka |
gaMTu kaTTalikke kalisOdu rokka | tuMTatanagaLannu balisOdu rokka ||2||
 
illada guNagaLa tarisOdu rokka | sallada nANyava naDesOdu rokka |
bellakkiMtalU bahu saviyAda rokka | illadiralu bahu duHKa kANakka ||3||

uMTAda guNagaLa maresOdu rokka | bhaMTaranellara barisOdu rokka |
kaMThi sarigeyannu gaLisOdu rokka | oMTe kudure Ane tarisOdu rokka ||4||
 
vidyada manujara karesOdu rokka | hoddidda janarannu biDisOdu rokka ||
muddu puraMdara viThalana maresuva | bid~hOgO rokkava suDu nInakka ||5||

Popular posts from this blog

ನಾರಾಯಣ ನಾರಾಯಣ ಗೋವಿಂದ | ಪುರಂದರ ವಿಠಲ | Narayana Narayana Govinda | Purandara Vithala

ಶ್ರೀನಿವಾಸ ಕಲ್ಯಾಣ | ಸ್ತ್ರೀಯರೆಲ್ಲರು ಬನ್ನಿರೆ | ಹಯವದನ | Srinivasa Kalyana | Vadirajaru

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru