ಕೋಟೀಶ್ವರ ಸುಳಾದಿ | ಶ್ರೀ ವಿಜಯದಾಸರ ಕೃತಿ | Koteeshwara Sulaadi | Sri Vijayadasara Kruti

Image
Koteeshwara Sulaadi / ಕೋಟೀಶ್ವರ ಸುಳಾದಿ ಧ್ರುವತಾಳ ರುದ್ರೇಣ ಲವಣಾಂಭಸಿ ಎಂಬೊ ಪ್ರಮಾಣ ಈ ಸ | ಮುದ್ರದೊಳಗೆ ಹತ್ತು ಮಹಾಕಲ್ಪಾ | ಇದ್ದು ಕ್ಷಾರೋದಕ ಪಾನಮಾಡಿ ಪದವಿ | ಸಿದ್ಧ ಮಾಡಿಕೊಂಡು ನರಸಿಂಹನ ಹೃದಯದಲ್ಲಿ ಇಟ್ಟು ಕೈಲಾಸಪತಿ ತಾನು | ತ್ರಿದ್ದಶರಲ್ಲಿ ಮಹಾದೇವನೆನಿಸಿ | ಪದ್ಮಜಾ ಪ್ರಧಾನಾ ವಾಯುರಿಂದಾಲಿ ನೋಡೆ | ವಿದ್ಯಾದಲ್ಲಿ ಕಡಿಮೆ ಮುಕ್ತಿಲಿ ಸಹ | ನಿರ್ಧಾರಾ ತಿಳಿದು ನಿತ್ಯಾ ಸ್ಮರಿಸೀ | ನಿರ್ದೋಷರಾಗುವರು ಸಜ್ಜನರೂ | ಶುದ್ಧ ಮೂರುತಿ ನಮ್ಮ ವಿಜಯವಿಠಲರೇಯಾ | ರುದ್ರನ ಪಾಲಿಪ ಪ್ರಭುವೆ ಎನ್ನಿ ||೧|| ಮಟ್ಟತಾಳ ಗಿರಿಜಾಪತಿ ಶಿವನು ನಿರುತ ವೈರಾಗ್ಯದಲಿ | ಇರುತಿಪ್ಪನು ತನ್ನ ಪರಿವಾರದ ಒಡನೆ | ಸಿರಿ ರಾಮನಾಮಾ ಸ್ಮರಣೆಮಾಡಿಕೊಳುತಾ | ಸುರರಿಗೆ ಗುರುವೆನಿಸಿ ಪರಮ | ಪುರುಷ ನಮ್ಮ ವಿಜಯವಿಠಲನಿಂದಾ | ಶರಣರ ಭಯ ಉತ್ತಾರ ಮಾಡುವಾ ಕರುಣಿ ||೨|| ತ್ರಿವಿಡಿತಾಳ ಭಸ್ಮಾಸುರನು ಮಹತಪಮಾಡಿ ಉಗ್ರದಲಿ | ಪಶುಪತಿಯಾ ಒಲಿಸಿದ ಭಕುತಿಯಿಂದ | ಅಸಮನೇತ್ರನು ಬಂದು ನುಡಿದ ನಿನಗೇನು | ಕುಶಲ ಬೇಕೆನಲು ವಂದಿಸಿ ತಲೆವಾಗಿ | ವಸುಧಿಯೊಳಗೆ ಚಿತ್ರಾವರ ಒಂದು ಕೊಡು ಎಂದು | ಬೆಸಸೀದನು ಉರಿಹಸ್ತಾ ಕರುಣಿಸೆಂದೂ | ಎಸೆವ ಮಾತಿಗೆ ಸತಿಯಿಂದಾಗಲೆ ಅವನು | ಪುಶಿಯಿಲ್ಲದಾಗೆ ಪರೀಕ್ಷಿಸುವೆನೆನಲೂ | ದಶೆಗೆಟ್ಟು ಮುಂದಾಣ ಯೋಚನೆ ತೋರದೆ | ದಶದಿಶಿಗೆ ಓಡಿದಾ ಭೀತಿಯಿಂದ | ಅಸುರಾ ಬೆಂಬಿಡದೆ ಬರುತಿರಲು ಪೂರ್ವದಲ್ಲಿದ್ದಾ | ವಸತಿ ಇದೆ ಎಂದು ಅಡಗಿದಾನಲ್ಲಿ ...

ಬಾರೋ ಬ್ರಹ್ಮಾದಿ ವಂದ್ಯ | ಪುರಂದರ ವಿಠಲ | Baaro Brahmadi Vandya | Sri Purandara Dasaru


ಸಾಹಿತ್ಯ : ಶ್ರೀ ಪುರಂದರ ದಾಸರು (ಪುರಂದರ ವಿಠಲ)
Kruti: Sri Purandara Dasaru (Purandara vittala)


ಬಾರೋ ಬ್ರಹ್ಮಾದಿ ವಂದ್ಯ |ಪ| 
ವಸುದೇವ ಸುತನೆ |ಅಪ|

ಧಿಗಿಧಿಗಿ ನೀ ಕುಣಿದಾಡುತ ಬಾರೋ ದೀನರಕ್ಷಕನೇ | ಚಂದದಿ |
ಜಗದೀಶ ನೀ ಕುಣಿದಾಡುತ ಬಾರೋ ಚೆನ್ನಕೇಶವನೇ |೧|

ಗೊಲ್ಲರ ಮನೆಗೆ ಪೋಗಲು ಬೇಡ ಗೋವಿಂದ ಕೇಳೋ | ನಿನಗೆ |
ಹಾಲು ಬೆಣ್ಣೆ ಮೊಸರಿಕ್ಕುವೆ ಉಣ್ಣ ಬಾರೋ |೨|

ದೊಡ್ಡ ದೊಡ್ಡ ಮುತ್ತಿನ ಹಾರ ಹಾಕಿ ನೋಡುವೆನೋ | ನೀನು |
ದೊಡ್ಡ ಪುರದ ದ್ವಾರಕ ವಾಸ ಪುರಂದರ ವಿಠಲ ಬೇಗನೇ ಬಾರೋ |೩|

bArO brahmAdi vaMdya |pa| 
vasudEva sutane |apa|
 
dhigidhigi nI kuNidADuta bArO dInarakShakanE | caMdadi |
jagadISa nI kuNidADuta bArO cennakESavanE |1|
 
gollara manege pOgalu bEDa gOviMda kELO| ninage|
hAlu beNNe mosarikkuve uNNa bArO |2|
 
doDDa doDDa muttina hAra hAki nODuvenO |nInu|
doDDa purada dvAraka vAsa puraMdara viThala bEganE bArO |3|


Popular posts from this blog

ಹರಿಕಥಾಮೃತಸಾರ | ಪಿತೃಗಣ ಸಂಧಿ | ಜಗನ್ನಾಥವಿಠಲ | Pitrugana Sandhi | Jagannatha Dasaru | Harikathamruthasara

ಗೌರಿ ಆರತಿ ಹಾಡು | ಗೌರಿ ದೇವಿಗೆ ಸಖಿ | ಶ್ಯಾಮಸುಂದರ | Gouri Arati Song | Gouri Devige| Shyamasundara

ಶ್ರೀ ಕಂಕಣಾಕಾರ ಸುಳಾದಿ | ಶ್ರೀ ವಿಜಯ ದಾಸರ ರಚನೆ | Sri Kankanakara Suladi | Sri Vijaya Dasaru